CRIMENEWSನಮ್ಮರಾಜ್ಯ

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದ್ದವರ ವಿರುದ್ಧ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದವರ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಪಿಣ್ಯದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46, ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಅಕ್ರಮ ರೀಪಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜೆನ್ಸಿ ಅಂಗಡಿ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಒಟ್ಟು ಶೇ.20 ಸಿಲಿಂಡರ್‌ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ, ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟಿನ್‌ಗಳಿಗೆ ಪ್ರಮುಖ ದೇವಸ್ಥಾನ ಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳು, ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇರಿಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ವಿತರಿಸಲು ಸೂಚಿಸಲಾಗಿದೆ.

ಇಂದು ರಾಜ್ಯದಾದ್ಯಂತ 14.2 kgಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್‌ಗಳನ್ನು ವಿತರಣೆ ಮಾಡಲಾಗಿದೆ. ಗೃಹ ಬಳಕೆಯ ಸಿಲಿಂಡರ್‌ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ತಿಳಿಸಿದೆ.

Megha
the authorMegha

Leave a Reply

error: Content is protected !!