ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ: ಹೋಟೆಲ್ ಮಾಲೀಕರಿಗೆ ಡಿಸಿ ಸಲಹೆ
ಧಾರವಾಡ: ಕೊರೊನಾ ವೈರಸ್ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹೋಟೆಲ್, ಖಾನಾವಳಿ, ರೆಸ್ಟೊರೆಂಟ್‍ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮಾಲೀಕರು ಮತ್ತು ನಿರ್ವಾಹಕರು ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಲಸಗಾರರು ಶುಚಿತ್ವದಿಂದ ಗ್ರಾಹಕರಿಗೆ ಸೇವೆ ನೀಡುವುದನ್ನು ಮಾಲೀಕರು ಖಚಿತಪಡಿಸಿಕೊಳ್ಳಬೇಕು....