ಹೊರದೇಶದಲ್ಲಿರುವ ಜಿಲ್ಲೆ ಜನರ ಮಾಹಿತಿ ನೀಡಿ: ಡಿಸಿ ಡಾ.ಬೊಮ್ಮನಹಳ್ಳಿ ಮನವಿ
ಬೆಳಗಾವಿ: ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ಧೇಶದಿಂದ ಹೊರದೇಶಗಳಲ್ಲಿ...