CrimeNEWSನಮ್ಮರಾಜ್ಯ

ಕಾಡ್ಗಿಚ್ಚಿಗೆ ಸಿಲುಕಿ ಗಂಭೀರವಾಗಿ ಸುಟ್ಟಗಾಯ: ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಮೃತ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನ- ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಶೇ.80ರಷ್ಟು ಸುಟ್ಟು ಹೋಗಿದ್ದ ಫಾರೆಸ್ಟ್ ಗಾರ್ಡ್ ಒಬ್ಬರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಫೆಬ್ರುವರಿ 16ರ ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಅದನ್ನು ನಂದಿಸಲು ಡಿಆರ್‌ಎಫ್‌ಒ ಮಂಜುನಾಥ ನೇತೃತ್ವದಲ್ಲಿ ತೆರಳಿದ್ದ ಆರುಮಂದಿ ಅರಣ್ಯ ಇಲಾಖೆ ಸಿಬ್ಬಂದಿ ವೇಗವಾಗಿ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ. ಆ ಕಾಡ್ಗಿಚ್ಚು ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರೆದಿದ್ದರಿಂದ ಅದರಿಂದ ಪಾರಾಗಲು ಹರಸಾಹಸಪಟ್ಟಿದ್ದಾರೆ.

ಆದರೆ, ಹತ್ತಿರದಲ್ಲೇ ಇದ್ದ ಡಿಆರ್‌ಎಫ್‌ಒ ಮಂಜುನಾಥ, ಫಾರೆಸ್ಟ್ ಗಾರ್ಡ್ ಸುಂದರೇಶ್, ವಾಚರ್‌ಗಳಾದ ತುಂಗೇಶ್ ಮತ್ತು ಮಹೇಶ್‌ ಅವರಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಬೆಂಕಿಯಲ್ಲಿ ಬಹುತೇಕ ದೇಹವೆಲ್ಲ ಸುಟ್ಟುಹೋಗಿ ಗಂಭೀರ ಸ್ಥಿತಿಗೆ ತಲುಪಿದ ಸುಂದರೇಶ್ ಹಾಗೂ ಮಂಜುನಾಥ ಅವರನ್ನು ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಬೆಂಗಳೂರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ರಾತ್ರಿ ಸುಂದರೇಶ್ ಅಸುನೀಗಿದ್ದಾರೆ.

ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿದ್ದ ಸಿಬ್ಬಂದಿ, ಚಿಕಿತ್ಸೆ ಮತ್ತು ಸಾವಿರಾರು ಜನರ ಪ್ರಾರ್ಥನೆ ಫಲಿಸದೆ ಶೇ.80 ರಷ್ಟು ಸುಟ್ಟಗಾಯಳಾಗಿದ್ದ ಸುಂದರೇಶ್ ಕೊನೆಯುಸಿರೆಳೆದಿರುವುದು ಹಾಸನ- ಸಕಲೇಶಪುರದ ಇಲಾಖೆ ಸಿಬ್ಬಂದಿಗಳಲ್ಲಿ ದುಃಖ ಮಡುಗಟ್ಟಿದಂತಾಗಿದೆ. ಇಡೀ ಆರಣ್ಯದಲ್ಲಿ ಸೂತಕದ ಛಾಯೆ ಆವರಿಸಿದೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಹಾಸನದಲ್ಲಿ ಅರಣ್ಯ ಇಲಾಖೆ ವತಿಯಿಂದ ಗೌರವಾರ್ಪಣೆ ಬಳಿಕ ಹುಟ್ಟೂರಿಗೆ ಮೃತದೇಹ ಸ್ಥಳಾಂತರಿಸಿ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನಾಳೆ ( ಫೆ.19ರ ಭಾನುವಾರ) ನೆರವೇರಲಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್