NEWSನಮ್ಮಜಿಲ್ಲೆನಮ್ಮರಾಜ್ಯ

“ಕಾವೇರಿ”ದ ಕರ್ನಾಟಕ ಬಂದ್‌: ಪೊಲೀಸರ ಸರ್ಪಗಾವಲು ನಡುವೆಯೂ ರಾಜ್ಯಾದ್ಯಂತ ಅಭೂತಪೂರ್ವ ಸ್ಪಂದನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಬಿಸಿ ಕ್ಷಣದಿಂದ ಕ್ಷಣಕ್ಕೆ ಜೋರಾಗುತ್ತಿದೆ. ನೂರಾರು ಸಂಘಟನೆಗಳು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದು, ಇಡೀ ರಾಜ್ಯವೇ ಸ್ತಬ್ಧವಾಗಿದೆ. ಬಂದ್​ ಬಿಸಿ ಸರ್ಕಾರಕ್ಕೆ ಮುಟ್ಟಿಸುವುದಕ್ಕೆ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ಭಾರೀ ಹೋರಾಟ ನಡೆಸುತ್ತಿವೆ.

ಮಂಗಳೂರು ಭಾಗ ಹೊರತು ಪಡಿಸಿ ಇಡೀ ಕರುನಾಡೇ ಲಾಕ್​ ಆಗಿದೆ. ರಸ್ತೆಗಿಳಿದಿರುವ ನೂರಾರು ಸಂಘಟನೆಗಳ ಮುಖಂಡರು ಕಾರ್ಯಕರ್ತರಿಂದ ಕಾವೇರಿ ಕಿಚ್ಚು ಕಾವೇರುತ್ತಿದೆ. ಬಂದ್ ಹಿನ್ನೆಲೆಯಲ್ಲಿ ಟೋಲ್ ಗೇಟ್, ರಾಷ್ಟ್ರೀಯ ಹೆದ್ದಾರಿಗಳು ಬಂದ್‌ಆಗುತ್ತಿದೆ.

ಕನ್ನಡ ಸಂಘಟನೆಗಳಿಂದ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲೇ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಗಳ ವ್ಯಾಪ್ತಿ ಮಾತ್ರವಲ್ಲದೆ, ತಾಲೂಕು ಕೇಂದ್ರಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲೂ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌, ಟೌನ್‌ಹಾಲ್‌, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಅತ್ತಿಬೆಲೆ, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಹೋರಾಟವು ಸಮಯ ಕಳೆದಂತೆ ತೀವ್ರಗೊಳ್ಳುತ್ತಿದೆ.

ರಾಜ್ಯದ ಯಾವೆಲ್ಲ ಪ್ರಮುಖ ಹೆದ್ದಾರಿ ಬಂದ್‌ಆಗುತ್ತಿವೆ: * ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ. * ಹುಣಸನಹಳ್ಳಿ – ರಾಮನಗರ. * ಮಂಡ್ಯ – ಹಾಸನ. * ಬಂಗಾರಪೇಟೆ – ಕೋಲಾರ. * ಜೇವರ್ಗಿ ಶ್ರೀರಂಗಪಟ್ಟಣ. * ಚಿಕ್ಕಮಗಳೂರು – ಚಿತ್ರದುರ್ಗ. * ದಾವಣಗೆರೆ – ಚಿಕ್ಕಮಗಳೂರು. * ಕೊಡಗು – ಶಿವಮೊಗ್ಗ. * ತುಮಕೂರು – ಮೈಸೂರು. * ಚಾಮರಾಜನಗರ – ಈರೋಡು. * ನಂಜನಗೂಡು – ಊಟಿ ರಸ್ತೆ * ಚಿತ್ರದುರ್ಗ – ಬೆಂಗಳೂರು ಗ್ರಾಮಾಂತರ.

ರಾಜ್ಯದ ಈ ಟೋಲ್​ಗಳ ಬಳಿ ಪ್ರತಿಭಟನೆ: * ಬೆಂಗಳೂರು – ನೆಲಮಂಗಲ ಬಳಿಯ ನವಯುಗ ಟೋಲ್ * ಬೆಂಗಳೂರು – ದೇವನಹಳ್ಳಿ ಏರ್ಪೋಟ್ ಬಳಿಯ ಟೋಲ್ * ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ಬಳಿಯ ಕಣಮಿಣಕಿ ಟೋಲ್, ರಾಮನಗರ ಟೋಲ್, ಶ್ರೀರಂಗಪಟ್ಟಣ ಟೋಲ್ * ಮೈಸೂರು -ಊಟಿ ರಸ್ತೆ ಟೋಲ್ * ತಿ ನರಸೀಪುರ ಟೋಲ್ * ಹಾಸನ – ಬೆಂಗಳೂರು ಹೆದ್ದಾರಿ ಟೋಲ್ * ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಟೋಲ್.

ಈಗಾಗಲೇ ಇಡೀ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ರೋಡಿಗಿಳಿದಿದ್ದು, ಕಳೆದ ಮಂಗಳವಾರವಷ್ಟೇ ಬೆಂಗಳೂರು ಬಂದ್​ ಆಚರಿಸಿದರು ಹೋರಾಟಗಾರರ ಕಿಚ್ಚು ಮಾತ್ರ ಇನ್ನು ತಣ್ಣಗಾಗಿಲ್ಲ ಎಂಬುದಕ್ಕೆ ಇದು ನಿದರ್ಶನವಾಗಿ. ಇದೀಗ ಅಖಂಡ ಕರ್ನಾಟಕ ಬಂದ್​ ನಡೆಯುತ್ತಿದೆ. ಬೆಂಗಳೂರು ಬಂದ್​ ದಿನವೇ ಕನ್ನಡಿಗರಿಗೆ ಮತ್ತೊಂದು ಆಘಾತ ಉಂಟಾಯಿತು. ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ಅಂದು ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿತು. ಇದರಿಂದ ರೈತರ ಆಕ್ರೋಶದ ಕಟ್ಟೆ ಹೊಡೆದಿದ್ದು, ಇಂದಿನ ಬಂದ್​ ಪರಿಣಾಮಕಾರಿಯಾಗಿ ನಡಯುತ್ತಿದೆ.

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂದು ಸೆ.12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ CWMA ಆದೇಶವನ್ನು ಎತ್ತಿಹಿಡಿದಿತ್ತು.

ಅದರಂತೆ ರಾಜ್ಯ ಸರ್ಕಾರ ನೀರು ಬಿಡುಗಡೆ ಸಹ ಮಾಡಿತು. ಅತ್ತ ಸಂಘಟನೆಗಳು ಬಂದ್​ ಸಹ ಆಚರಿಸಿದವು. ಇದರ ನಡುವೆ ಮತ್ತೆ 3000 ಸಾವಿರ ಕ್ಯೂಸೆಕ್​ ನೀರು ಹರಿಸಲು ಕಾವೇರಿ ನದಿ ನೀರು ಸಮಿತಿ ಶಿಫಾರಸು ಮಾಡಿರುವುದರಿಂದ ಇಂದಿನ ಕರ್ನಾಟಕ ಬಂದ್​ ತೀವ್ರತೆ ಪಡೆದುಕೊಳ್ಳುವ ಮೂಲಕ ಯಶಸ್ವಿಯಾಗುತ್ತಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...