NEWSನಮ್ಮಜಿಲ್ಲೆಸಂಸ್ಕೃತಿ

ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿಂದು ದೀಪಾವಳಿ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಾರ್ವಜನಿಕರು ಮಾಲಿನ್ಯಕಾರಕ , ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂಬ ಸರ್ವೋಚ್ಚ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳು (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು ಎಂದರು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಿ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ ಯಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೊಲು ಹಾಕಿಕೊಳ್ಳಬೇಕು, ಸಾಗಾಟ ಮಾಡುವ ವಾಹನವನ್ನು ವಶಪಡಿಸಿಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಪಟಾಕಿ ಅಂಗಡಿಗಳನ್ನು ತೆರೆದ ಪ್ರದೇಶದಲ್ಲಿ ಮತ್ತು ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ಮತ್ತು ಅಂಗಡಿಗಳ ಮುಂದೆ ಸಾರ್ವಜನಿಕರು ಹೆಚ್ಚು ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಅಗ್ನಿಶಾಮಕ ದಳದವರೂ ಜಾಗೃತರಾಗಿರಿ ಎಂದರು.

ಪಟಾಕಿಗಳನ್ನು ಹಗಲು ಸಮಯದಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಅಂಗಡಿಗಳ ಮಾಲೀಕರು ಯಾವುದೇ ಕಾರಣಕ್ಕೂ ಪಾಲಕರ ಸಮಕ್ಷಮ ಇಲ್ಲದೆ 18 ವರ್ಷದೊಳಗಿನ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ ಈ ಬಗ್ಗೆ ಮಾರಾಟಗಾರರ ತಿಳುವಳಿಕೆ ನೀಡಿ ಎಂದು ಪೊಲೀಸ್, ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗ ಶ್ರೀ, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಮಟ್ಟದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...