NEWSನಮ್ಮಜಿಲ್ಲೆನಮ್ಮರಾಜ್ಯ

ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ಡಾ.ಶಿವಶಂಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ (District Collector ) ಡಾ. ಶಿವಶಂಕರ್ ಎನ್. ಕರೆ ನೀಡಿದ್ದಾರೆ.

ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಉಚ್ಚ ನ್ಯಾಯಾಲಯ ಆದೇಶ 18- 06-2019 ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಲ ಮಾಲಿನ್ಯ ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳು: 1. ಪ್ಲಾಸ್ಟರ್ ಆಫ್ ಪ್ಯಾರಿಸ್ (Plaster of Paris)  ಮೂರ್ತಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಸಂಸ್ಥೆಗಳಿಗೆ ವ್ಯಾಪಾರ ಲೈಸನ್ ನೀಡದಿರಲು ಮತ್ತು ಲೈಸೆನ್ಸ್‌ ಪಡೆಯದೇ ಅನಧಿಕೃತವಾಗಿ ತಯಾರಿ ಮಾರಾಟ ಮಾಡುವ ವ್ಯಕ್ತಿ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸುವುದು.

2.ಸದರಿ ಅಧಿಸೂಚನೆಯ ಅನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ / ಬಣ್ಣ ಲೇಪಿತ ಮೂರ್ತಿಗಳನ್ನು ಯಾವುದೇ ನದಿ / ಕಾಲುವೆ / ಬಾವಿಗಳಲ್ಲಿ, ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್ ಸೆಕ್ಷನ್ 1860) ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

3.ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ವಿಸರ್ಜಿಸುವುದು.

4.ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ, ಮೊಬೈಲ್, ಟ್ಯಾಂಕ್‌ಗಳಲ್ಲಿ/ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು,

5.ನೈಸರ್ಗಿಕ – ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್, ಟ್ಯಾಂಕ್‌ಗಳಲ್ಲಿ ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮ ವಹಿಸುವುದು. 6.ವಾರ್ಡ್‌ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿಗಳನ್ನು ರಚಿಸಿ, ಗಣೇಶ ಮೂರ್ತಿಗಳ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳುವುದು.

7.ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು, ಈ ಅನುಮತಿ ಪತ್ರಗಳಲ್ಲಿ ಲೈಸೆನ್ಸ್‌ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10.00 ರಿಂದ ಬೆಳಗ್ಗೆ 6.00 ಗಂಟೆಯ ವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು.

8.ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸುವುದು ಮತ್ತು ಈ ಬಗ್ಗೆ ಸೂಕ್ತ ಪ್ರಕಟಣೆಯನ್ನು ಹೊರಡಿಸುವುದು. 9. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ಮೂರ್ತಿಗಳ ತಯಾರಿ ಕಂಡು ಬಂದಲ್ಲಿ ತನಿಖೆ ಮಾಡಿ ಸುಪರ್ದಿಗೆ ತೆಗೆದುಕೊಳ್ಳಲು ಕ್ರಮ ವಹಿಸುವುದು.

10.ಜಿಲ್ಲೆ ಅಥವಾ ತಾಲ್ಲೂಕುಗಳಿಗೆ ಬೇರೆ ಸ್ಥಳಗಳಿಂದ ಬರುವಂತಹ ಪಿ.ಒ.ಪಿ. ಮೂರ್ತಿಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ ಪೋಸ್ಟ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವುದು. 11. ಕರ್ನಾಟಕ ಸರ್ಕಾರದಿಂದ ಈಗಾಗಲೇ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸಂಬಂಧದ ಬಗ್ಗೆ ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳ ಅನುಷ್ಠಾನದ ಕುರಿತು ದಿನಾಂಕ 30.08.2022 ರಂದು ಸುತ್ತೋಲೆಯನ್ನು ಹೊರಡಿಸಲಾಗಿದೆ.

ಸುತ್ತೋಲೆಯಂತೆ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾ‌ಲ್ ಗಳಲ್ಲಿ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೆರೀನ್ (ಥರ್ಮೋಕೋಲ್) ಗಳನ್ನು ಬಳಸದಂತೆ ನಿಗಾವಹಿಸುವುದು.

ಪ್ಲಾಸ್ಟಿಕ್ ನಿಷೇಧ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಎಲ್ಲ ನಗರಸಭೆ, ಪಾಲಿಕೆ ಹಾಗೂ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್ ಗಳು, ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ದಪ್ಪದ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಫೋರ್ಕ್‌ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್‌ಗಳು / ಆಮಂತ್ರಣ ಪತ್ರಗಳು / ಸಿಗರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್‌ಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್‌ಗಳು ನಿಷೇಧಿತವಾಗಿದ್ದು ಅಧಿಕಾರಿಗಳು, ಮಾರ್ಷಲ್‌ಗಳು ಈ ವಸ್ತುಗಳ ಬಳಕೆಯಾಗದಂತೆ ನಿಗಾವಹಿಸ ತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...