NEWSಕೃಷಿದೇಶ-ವಿದೇಶನಮ್ಮರಾಜ್ಯ

ಕೇಂದ್ರ ಸರ್ಕಾರದ ಜತೆ 5 ಗಂಟೆ ಚರ್ಚೆ:  ಐದು ಬೆಳೆಗೆ ಬೆಂಬಲ ಬೆಲೆ ಖಾತರಿ ನೀಡಲು ಬದ್ಧ ಎಂಬ ಪ್ರಸ್ತಾವನೆ ಮುಂದಿಟ್ಟ ಕೇಂದ್ರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಹೆಸರುಕಾಳು ಉದ್ದು, ಉದ್ದಿನಬೇಳೆ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳಿಗೆ ದೇಶಾದ್ಯಂತ ಎಂಎಸ್‌ಪಿ ಖಾತರಿ ಕಾನೂನು ನೀಡುವ ಬಗ್ಗೆ ಕೇಂದ್ರ ಸರ್ಕಾರ ರೈತರಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಕರ್ನಾಟಕ ರಾಜ್ಯದ ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯತರ ) ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾನುವಾರ ನಡೆದ ಕೇಂದ್ರ ಸರ್ಕಾರದ ಜತೆಗಿನ ರೈತ ಮುಖಂಡರ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ರೈತರಿಗೆ ಈ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕ ರೈತರು ಒಪ್ಪಿದ್ದರೆ, ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೊಂದಿಗೆ ಐದು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಹೇಳಿದೆ.

ಇನ್ನು ಸಹಿ ಹಾಕಿದರೆ ಮೊದಲ ಹಂತದಲ್ಲಿ ಈ ಯೋಜನೆ ಜಾರಿ ಮಾಡಲಾಗುವುದು, ಮುಂದಿನ ಹಂತದಲ್ಲಿ ಇತರ ಬೆಳೆಗಳಿಗೂ ವಿಸ್ತರಿಸುವ ಚಿಂತನೆ ನಡೆಸಲಾಗುವುದು ರೈತರು ಇದನ್ನು ಒಪ್ಪಿದರೆ ಇನ್ನುಳಿದ ಒತ್ತಾಯ, ಸಾಲ ಮನ್ನಾ ವಿಚಾರ, ಸ್ವಾಮಿನಾಥನ್ ವರದಿ ಬೆಂಬಲ ಬೆಲೆ, ಡಬ್ಲ್ಯೂಟಿಒ ಒಪ್ಪಂದ, ರೈತರಿಗೆ ಪಿಂಚಣಿ ನೀಡುವ ಯೋಜನೆ, ಬೆಳೆ ವಿಮೆ ಪದ್ಧತಿ, ಕಳೆದು ವರ್ಷ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವು ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಸಚಿವ ಪಿಯುಷ್ ಗೂಯಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಸ್ತಾವನೆ ಬಗ್ಗೆ ಸಭೆಯಲ್ಲಿ ಭಾಗವಹಿಸಿದ ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲ ಮಾತನಾಡಿ, ನಾವು ಇನ್ನೂರಕ್ಕೂ ಹೆಚ್ಚು ಸಂಘಟನೆಗಳ ಮುಖಂಡರ ಜತೆ ಹಾಗೂ ವಿಷಯ ಪರಿಣಿತರ ಜತೆ ಚರ್ಚೆ ಮಾಡಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಹೇಳಿ ಕಾಲವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಹೋರಾಟ ಆರಂಭವಾದ ನಂತರ ಕೇಂದ್ರ ಸರ್ಕಾರದ ಜತೆ ಇದು ನಾಲ್ಕನೇ ಸುತ್ತಿನ ಮಾತುಕತೆಯಾಗಿದ್ದು, 5 ಗಂಟೆಗಳ ಕಾಲ ಸಭೆಯಲ್ಲಿ ಚರ್ಚೆ ನಡೆದು ಈ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ಕಾರ ಮಂದಗತಿ ಧೋರಣೆ ತೋರಿದರೆ ಫೆ.21ರಂದು ಲಕ್ಷಾಂತರ ರೈತರು ದೆಹಲಿ ಚಲೋ ನಡೆಸುವುದಾಗಿ ಸಮಸ್ಯೆ ಬಗೆಹರಿಯುವ ತನಕ ಚಳವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಅಶ್ರುವಾಯು ಪ್ರಯೋಗ: ಕಣ್ಣು ಕಳೆದುಕೊಂಡ ಯುವ ರೈತ: ಪಂಜಾಬ್, ಹರಿಯಾಣ, ಸೇರಿದಂತೆ ಬೇರೆ ಬೇರೆ ರಾಜ್ಯಗಳ 14 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದರು ಮುಖ್ಯಮಂತ್ರಿ ಭಗವಂತಮಾನ್, ಕೇಂದ್ರ ಸಚಿವ ಪಿಯುಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡ, ರಾಜ್ಯ ಗೃಹ ಸಚಿವ ನಿತ್ಯಾನಂದ ರೈ ಹಾಗೂ ಸರ್ಕಾರದ ಕಾರ್ಯದರ್ಶಿಗಳು ಸಭೆಯಲ್ಲಿದ್ದರು.

13 ರಂದು ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಬರುತ್ತದ್ದ ರೈತರ ಮೇಲೆ   ಶಂಭು ಗಡಿಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದರು.

ಪಂಜಾಬ್‌ನ ಚೆಂಡಿಗಡ ಸರ್ಕಾರಿ ಆಸ್ಪತ್ರೆಗೆ ರೈತ ಮುಖಂಡರಾದ ಜಗಜಿತ್ ದಲೈವಾಲಾ ಜೊತೆ ಕುರುಬೂರು ಶಾಂತಕುಮಾರ್ ಭೇಟಿ ನೀಡಿದರು.

ಹರ್ಯಾಣ-ಪಂಜಾಬ್‌ ಗಡಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಹರ್ಯಾಣ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿ ಹಲವರನ್ನು ವಶಕ್ಕೆ ಪಡೆದಿದ್ದರು.  ರೈತರ ಗುಂಪಿನ ಮಧ್ಯೆ ಪೊಲೀಸರಿಗೆ ಹೋಗಲು ಸಾಧ್ಯವಿಲ್ಲದ ಕಾರಣ ಡ್ರೋನ್‌ ಮೂಲಕ ಟಿಯರ್‌ ಗ್ಯಾಸ್‌ ಶೆಲ್‌ಗಳನ್ನು ಬೀಳಿಸಿ ರೈತರನ್ನು ಚದುರಿಸಲು ಯತ್ನಿಸಿದರು.

ಈ ವೇಳೆ ಅಂದು ಪಂಜಾಬ್‌ನಲ್ಲಿ 96ರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲ ರೈತರು ಕಣ್ಣುಗಳನ್ನು ಕಳೆದುಕೊಂಡಿದ್ದಾರೆ ಎಂದು ಕುರುಬೂರು ಶಾಂತಕುಮಾರ್‌ ವಿಜಯಪಥಕ್ಕೆ ತಿಳಿಸಿದ್ದಾರೆ.

ಇನ್ನು ಗಾಯಾಳುಗಳನ್ನು ನೋಡಲು ಇಂದು ಪಂಜಾಬ್‌ನ ಚೆಂಡಿಗಡ ಸರ್ಕಾರಿ ಆಸ್ಪತ್ರೆಗೆ ರೈತ ಮುಖಂಡರಾದ ಜಗಜಿತ್ ದಲೈವಾಲಾ ಜತೆ ಕುರುಬೂರು ಶಾಂತಕುಮಾರ್ ಅವರು ಕೂಡ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ   ಯುವ ರೈತ ಮುಖಂಡರನ್ನು ಭೇಟಿ ಮಾಡಿ ಶೀಘ್ರ ಗುಣಮುಖರಾಗಿ ಎಂದು ಆಶೀಸಿದರು.

ಅಂದು ಪೊಲೀಸರ ದೌರ್ಜನ್ಯದಿಂದ ಕಣ್ಣಿಗೆ ಮಾರಣಾಂತಿಕ ಗಾಯವಾಗಿದ್ದು, ತುರ್ತುನಿಗಾ ಘಟಕದಲ್ಲಿ ಬಿಎ ವ್ಯಾಸಂಗ ಮಾಡುತ್ತಿರುವ ರೈತ ಯುವಕನ ನೋಡಿ ಭಾವುಕರಾದರು . ಇದೇ ವೇಳೆ ಅವರಿಗೆ  ಸಾಂತ್ವನ ಹೇಳಿದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ