NEWSಕೃಷಿದೇಶ-ವಿದೇಶನಮ್ಮರಾಜ್ಯ

ರೈತರ ಸಾಲ ಮನ್ನಾಕ್ಕೆ ʼಬಹುತೇಕ ಒಪ್ಪಿದ ಕೇಂದ್ರ ಸರ್ಕಾರ: ಫೆ.18ರ ಸಭೆಯಲ್ಲಿ ಘೋಷಣೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಎಂಎಸ್‌ಪಿ ಖರೀದಿ ಗ್ಯಾರಂಟಿ, ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ ಮತ್ತಿತರ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಇದೇ ಫೆ. 18ರ ಭಾನುವಾರ ಕರೆದಿರುವ ಸಭೆಯಲ್ಲಿ ಘೋಷಣೆ ಮಾಡಲಿದೆ ಎಂದು ರೈತ ರತ್ನ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ತಡರಾತ್ರಿವರೆಗೂ ಚಂಡಿಗಡದಲ್ಲಿ ನಡೆದ ಕೇಂದ್ರ ಸರ್ಕಾರ- ರೈತ ಮುಖಂಡರ ಸಭೆಯಲ್ಲಿ ಕೇಂದ್ರ ಸಚಿವ ಪಿಯುಷ್ ಗೂಯಲ್, ಕೃಷಿ ಸಚಿವ ಅರ್ಜುನ್ ಮುಂಡ, ರಾಜ್ಯ ಗೃಹ ಸಚಿವ ನಿತ್ಯಾನಂದರಾಯ್, ಪಂಜಾಬ್ ಮುಖ್ಯಮಂತ್ರಿ ಭಗವಾಂತ ಮಾನ್ ಅವರು ಪಂಜಾಬ್ ಹರಿಯಾಣ ಹಾಗೂ ದೇಶಾದ್ಯಂತ ನಡೆಯುತ್ತಿರುವ ರೈತ ಹೋರಾಟದ ಒತ್ತಾಯಗಳ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಮತ್ತೊಂದು ಸುತ್ತಿನ ಭಾನುವಾರದ ಸಭೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಸ್ಪಷ್ಟ ಘೋಷಣೆ ಮಾಡಲಾಗುವುದು ಎಂಬ ತೀರ್ಮಾನಿಸಿರುವುದಾಗಿ  ಕುರುಬೂರು ಶಾಂತಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು, ಕೃಷಿ ಉತ್ಪನ್ನಗಳಿಗೆ ಉತ್ಪಾದನಾವೆಚ್ಚ ವೆಚ್ಚಕ್ಕೆ ಲಾಭಾಂಶ ಸೇರಿಸಿ ನಿಗದಿ ಮಾಡಬೇಕು, ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು. 60ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮಾ ಪದ್ಧತಿ ಬದಲಾಗಿ ಪ್ರತಿ ರೈತನ ಹೊಲದ ಬೆಳೆ ವಿಮೆ ನೀತಿ ಜಾರಿಯಾಗಬೇಕು.

ಇವುಗಳ ಜತೆಗೆ ಕೃಷಿ ಭೂಮಿ ಭೂಸ್ವಾದಿನ ಪ್ರಕ್ರಿಯೆ ನಿಲ್ಲಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆಯ ದೆಹಲಿ, ಫಂಜಾಬ್‌, ಹರಿಯಾಣ ಸೇರಿದಂತೆ ಸುತ್ತ ಮುತ್ತ ರೈತರು ನಡೆಸುತ್ತಿರುವ ಹೋರಾಟ ತೀವ್ದರ ಸ್ವರೂಪ ಪಡೆದುಕೊಂಡಿರುವ  ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ ಎಂದು ವಿವರಿಸಿದ್ದಾರೆ.

ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಸಂದೇಶ ರವಾನೆಯಾಗದಂತೆ ತಡೆಯಲು ಇಂಟರ್ನೆಟ್, ಟ್ವಿಟ್ಟರ್, ಫೇಸ್ಬುಕ್, ಸೌಲಭ್ಯ ಬಂದ್ ಮಾಡಿರುವುದನ್ನು ಮರುಸಂಪರ್ಕ ಕಲ್ಪಿಸಲು ಒಪ್ಪಿದೆ. ಅಲ್ಲದೆ ರೈತಮುಖಂಡರು ಸರ್ಕಾರದ ಅಂತಿಮ ಘೋಷಣೆ ತನಕ ಶಾಂತಿಯುತ ಪ್ರತಿಭಟನೆ ನಡೆಸಲು ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕಾಗಿ ರೈತರಿಗಾಗಿ ಹಲವಾರು ಯೋಜನೆ ಜಾರಿ ಮಾಡಿದೆ ಎಂದು ಸಚಿವರು ವರದಿ ನೀಡುತ್ತಿದ್ದಾಗ, ಮಧ್ಯಪ್ರವೇಶ ಮಾಡಿ ಮಾತನಾಡಿದ ಕುರುಬುರ್ ಶಾಂತಕುಮಾರ್ ಅದೆಲ್ಲ ಗೊತ್ತಿದೆ ನಮ್ಮ ಹೋರಾಟದ ಸಮಸ್ಯೆಯ ಬಗ್ಗೆ ಮಾತನಾಡಿ, ರೈತರ ಕಣ್ಮಣಿ ಮಾಜಿ ಪ್ರಧಾನಿ ಚರಣ್ ಸಿಂಗ್, ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತರತ್ನ ನೀಡಿ ಗೌರವಿಸುತ್ತೀರಿ ಅವರ ವರದಿಯನ್ನು ಜಾರಿಗೆ ತರದೆ ನಿರ್ಲಕ್ಷತನ ತೋರುತ್ತೀರಿ. ಇದು ಕೇಂದ್ರ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಹೋರಾಟದಲ್ಲಿ ಭಾಗಿಗಳಾಗಿರುವ ವಿವಿಧ ರೈತ ಸಂಘಟನೆಗಳ 14 ರೈತ ಮುಖಂಡರು, ಮಧ್ಯರಾತ್ರಿ ಒಂದು ಗಂಟೆ ತನಕ ಸರ್ಕಾರ ಜತೆ ಮಾತುಕತೆಯಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ರೈತ ಮುಖಂಡ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಜಗಜಿತ್ ಸಿಂಗ್ ಧಲೆವಾಲ, ಶಿವಕುಮಾರ್ ಕಕ್ಕ, ಕುರುಬೂರ್ ಶಾಂತಕುಮಾರ್, ಶರವಣ ಸಿಂಗ್ ಪಾಂದಾರ್, ಅಶೋಕ್ ಬೋಲಾರಿಯ, ಲಕ್ವಿನ್ಧರ್ ಸಿಂಗ್, ಬಲವಂತ್ ಸಿಂಗ್, ಜರ್ನಲ್ ಸಿಂಗ್ ಮುಂತಾದವರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...