
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಅವರು ಇಂದು ದೇವನಹಳ್ಳಿ ತಾಲೂಕಿನ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿಯ ಸಿಬ್ಬಂದಿಗಳು ಹಾಜರಾತಿ ಮತ್ತು ಕಡತಗಳನ್ನು ಪರಿಶೀಲಿಸಿದರು.
ನಂತರ ದುದ್ದನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಹೊಸ ಕಾಮಗಾರಿಗಳ Pre-measurement ಮಾಡುವುದನ್ನು ನರೇಗಾ ಸಿಬ್ಬಂದಿಗಳು ಜತೆಗೆ ಪರಿಶೀಲನೆ ಮಾಡಿದರು. ಆಶ್ರಯ ಯೋಜನೆಯಡಿ ಸರ್ಕಾರದ ಜಾಗ ವೀಕ್ಷಿಸಿದರು.
ದಿನ್ನೂರು ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಆಹಾರ ಗುಣಮಟ್ಟ ಪರಿಶೀಲಿಸಿ ಕಾಲಕಾಲಕ್ಕೆ ಮಕ್ಕಳಿಗೆ ತೂಕ, ಎತ್ತರ, ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದರು.
ದಿನ್ನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಕೊಠಡಿಗಳನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು ಮಕ್ಕಳಿಗೆ ಪರಿಸರ, ಸ್ವಚ್ಚತೆ ಮತ್ತು ನೈರ್ಮಲ್ಯ ಕುರಿತು ಅರಿವು ನೀಡಿ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.