Please assign a menu to the primary menu location under menu

ನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ನಾಳೆ ಬೀಡನಹಳ್ಳಿ ಗ್ರಾಮದಲ್ಲಿ ಚಾಮುಂಡೇಶ್ವರಿ ಹಬ್ಬದ ಸಂಭ್ರಮಕ್ಕೆ ಸಜ್ಜು

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷದಂತೆ ಈ ವರ್ಷವು (ಸೆ.30) ಶುಕ್ರವಾರ ತಾಯಿ ಚಾಮುಂಡೇಶ್ವರಿ ಹಬ್ಬ ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದಲ್ಲಿ ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷ ನಾಳೆ ಹಬ್ಬ ಆಚರಣೆ ಮಾಡಲಾಗುತ್ತಿದೆ.

ಬೀಡನಹಳ್ಳಿಯಲ್ಲಿ ಚಾಮುಂಡೇಶ್ವರಿ ಹಬ್ಬದ ಅಂಗವಾಗಿ ಕಳೆದ ಶುಕ್ರವಾರ ಗಂಗೆ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನಾ 3-4ದಿನಗಳಿಂದ ಗ್ರಾಮಸ್ಥರು ಮನೆಯನ್ನು ಸ್ವಚ್ಛಗೊಳಿಸುವ ಸುಣ್ಣ-ಬಣ್ಣ ಬಳಿಯುವ ಮೂಲಕ ಮನೆಯಲ್ಲಿ ಹಬ್ಬದ ವಾತಾವರಣವನ್ನು ಹೆಚ್ಚಿಸಿದರು.

ಇನ್ನು ಹಬ್ಬದ ಅಂಗವಾಗಿ ನಾಳೆ ಗ್ರಾಮದ ಹೆಂಗಳೆಯರು ತಂಬಿಟ್ಟಿನ ಆರತಿಯೊಂದಿಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನೆರವೇರಿಸುವರು. ಈ ವೇಳೆ ಬಂಧು ಬಳಗ, ಸ್ನೇಹಿತರು ಸೇರಿದಂತೆ ಆಪ್ತರನ್ನು ಹಬ್ಬಕ್ಕೆ ಆಹ್ವಾನಿಸುವುದು ರೂಡಿ. ಆದರೆ, ಇತ್ತೀಚಿನ ದಿನಗಳಲ್ಲಿ ಹಬ್ಬಕ್ಕೆ ಹೆಣ್ಣುಮಕ್ಕಳು ಮತ್ತು ಹೊಸ ಸಂಬಂಧಿಕರಿಗಷ್ಟೇ ಆಹ್ವಾನ ನೀಡುವುದು ಸಮಾನ್ಯವಾಗಿದೆ.

ನಾಳೆ ಸೆ.30 ರಂದು ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ, ಸಮೇತ ಮಾರಮ್ಮ, ಮುತ್ತತ್ತಿರಾಯನ ಪೂಜೆ ಹೊತ್ತು ಬೀಡನಹಳ್ಳಿ ಗ್ರಾಮದ ರಾಜ ಬೀದಿಗಳ ಮೂಲಕ ಮೆರವಣಿಗೆ ಮಾಡಿ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಆಗಮಿಸಿ ಪೂಜೆ ನೆರವೇರಿಸಲಾಗುವುದು.

ಇದಕ್ಕೂ ಮುನ್ನಾ ಬನ್ನೂರು ಹೆಗ್ಗೆರೆಯಿಂದ ಮತ್ತೆ ಹೂ ಹೊಂಬಾಳೆಯಾಗಿ ಬರುವ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಪೂಜೆಯೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ತೀರ್ಥ ಸಂಪ್ರೊಕ್ಷಣೆ ಮಾಡಿದ ಬಳಿಕ ದೇವಿಗೆ ಪೂಜೆ ನೆರವೇರಿಸಲಾಗುವುದು.

ಇನ್ನು ಗ್ರಾಮವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ದೇವಸ್ಥಾನ ಮತ್ತು ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಗಳು ಜಗಮಗಿಸುತ್ತಿವೆ. ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಯಾದ ಬಳಿಕ ನವರಾತ್ರಿಯ ಮೊದಲ ಶುಕ್ರವಾರ ಗ್ರಾಮದಲ್ಲಿ ಹಬ್ಬ ಆಚರಣೆ ಸಾಂಪ್ರದಾಯಕವಾಗಿ ಮಾಡಿಕೊಂಡು ಬರಲಾಗುತ್ತಿದೆ.

 

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?