CrimeNEWSರಾಜಕೀಯ

ಚಂದ್ರೇಗೌಡರ ಬದುಕು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಲಿ: ಡಾ. ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಮಂಗಳವಾರ ನಿಧನರಾದ ನಾಡು ಕಂಡ ಹಿರಿಯ ಮುತ್ಸದ್ದಿ ಹಾಗೂ ರಾಜಕಾರಣಿ ಡಿ.ಬಿ. ಚಂದ್ರೇಗೌಡ ಅವರ ಅಂತಿಮ ದರ್ಶನವನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು  ಪಡೆದರು.

ಜಿಲ್ಲೆಯ ಮೂಡಿಗೆರೆಯಲ್ಲಿ ನಡೆಯಲಿರುವ ಚಂದ್ರೇಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ಡಿ.ಬಿ. ಚಂದ್ರೇಗೌಡರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ  ಚಂದ್ರು, ಅವರ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು.

ನಮ್ಮಿಬ್ಬರ ನಡುವೆ 35 ವರ್ಷಗಳ ಒಡನಾಟವಿತ್ತು, ರಾಜಕೀಯ ಮಾತ್ರವಲ್ಲದ ಸಾಹಿತ್ಯ, ಸಂಗೀತ ಮತ್ತು ನಾಟಕ ಕ್ಷೇತ್ರದಲ್ಲಿ ಕೂಡ ಚಂದ್ರೇಗೌಡರು ಆಸಕ್ತಿ ಹೊಂದಿದ್ದರು. 1985ರಲ್ಲಿ ಎಂಎಲ್‌ಎ, ಎಂಎಲ್‌ಸಿಯಾಗಿದ್ದ ಸಂದರ್ಭದಲ್ಲಿ ಅವರ ಜತೆ ಸದನದಲ್ಲಿ ಭಾಗವಹಿಸಿದ್ದೆ, ಅವರದ್ದು ಅಪರೂಪದ ವ್ಯಕ್ತಿತ್ವ ಎಂದರು.

ರಾಜಕೀಯದಲ್ಲಿ ಸಾಕಷ್ಟು ಎತ್ತರಕ್ಕೆ ಏರಿದರೂ ಕೂಡ ಅವರು ನಿಗರ್ವಿಯಾಗಿದ್ದರು. ಹಲವು ಪಕ್ಷಗಳಲ್ಲಿ ಓಡಾಡಿದರು ಅವರು ಅಜಾತಶತ್ರುವಾಗಿದ್ದರು. ರಾಜಕೀಯ ಹೊರತಾಗಿಯೂ ಅವರು ಹಲವು ಕ್ಷೇತ್ರಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು ಎಂದರು.

ಅಲ್ಲದೆ ತಮ್ಮ ರಾಜಕೀಯ ಜೀವನದಲ್ಲಿ ಅವರು ಕಪ್ಪುಚುಕ್ಕೆ ಹೊಂದಿರಲಿಲ್ಲ, ಅಂತಹವರು ಅಪರೂಪ, ಅವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ, ಅವರ ಕುಟುಂಬಕ್ಕೆ ಧೈರ್ಯ ಕೊಡಲಿ ಎಂದು ನಾನು ಪಕ್ಷ ಮತ್ತು ರಾಜ್ಯದ ಜನತೆ ಪರವಾಗಿ ಕೋರುತ್ತೇನೆ ಎಂದರು.

ರಾಜಕಾರಣ ಬಹಳ ಬದಲಾಗಿದೆ: ಅಂದಿನ ರಾಜಕೀಯಕ್ಕೂ ಇಂದಿನ ರಾಜಕೀಯಕ್ಕೂ ಸಾಕಷ್ಟು ವ್ಯತ್ಯಾಸವಿದೆ, ಇಂದಿನ ರಾಜಕೀಯ ಸಾಕಷ್ಟು ಕಲುಷಿತವಾಗಿದೆ, ಅಂದಿನ ರಾಜಕಾರಣದಲ್ಲಿ ಮೌಲ್ಯಕ್ಕೆ ಬೆಲೆ ಇತ್ತು, ಅಂದು ತಪ್ಪು ಮಾಡಿದರೆ ರಾಜಕೀಯದಲ್ಲಿ ಇರಬೇಕಿತ್ತಾ ಎಂದು ಯೋಚಿಸುತ್ತಿದ್ದರು.

ಇಂದು ಅದು ರಾಜಕೀಯದ ಭಾಗವಾಗಿ ಹೋಗಿದೆ, ಅಂದು ನಾವು ಜನಸೇವಕರು ಎನ್ನುವ ಭಾವನೆ ರಾಜಕಾರಣಿಗಳಲ್ಲಿತ್ತು, ಇಂದು ಜನ ನಮ್ಮ ಸೇವಕರು ಎನ್ನುವಂತಾಗಿದೆ, ಎಲ್ಲರೂ ಅಲ್ಲದಿದ್ದರೂ ಬಹುತೇಕ ರಾಜಕಾರಣಿಗಳ ಮನಸ್ಥಿತಿ ಇದೇ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಸಭೆ ಹಾಗೂ ವಿಧಾನಸಭೆಯ ನಾಲ್ಕು ಸದನಗಳಲ್ಲಿ ಚಂದ್ರೇಗೌಡರು ಅತ್ಯಂತ ಕ್ರಿಯಾಶೀಲರಾಗಿದ್ದರು, ಈಗಿನ ಮತ್ತು ಮುಂದಿನ ಪೀಳಿಗೆಯ ರಾಜಕಾರಣಿಗಳಿಗೆ ಅವರ ಬದುಕು ಮಾದರಿಯಾಗಿದೆ ಎಂದು ಹೇಳಿದರು. ಆಮ್ ಆದ್ಮಿ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದರ್ಶನ್ ಜೈನ್ ಹಾಗೂ ಪ್ರಧಾನ ಕಾರ್ಯದರ್ಶಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!