CrimeNEWSನಮ್ಮಜಿಲ್ಲೆ

ಎಂ.ಪಿ.ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಕಳೆದ ಅ.30ರಂದು ನಾಪತ್ತೆಯಾಗಿದ್ದ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದು, ಸಹೋದರನ ಮಗನ ಶವ ನೋಡುತ್ತಿದ್ದಂತೆಯೇ ಶಾಸಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಭಾವನಾತ್ಮಕವಾಗಿ ಮಾತನಾಡುತ್ತಾ ನಿನ್ನ ಸಾವಿಗೆ ನಾನೇ ಕಾರಣ. ಚಂದ್ರು.. ಚಂದ್ರು.. ಎಂದು ಕಾರನ್ನು ಬಡಿದು ಕಣ್ಣೀರು ಹಾಕಿದ್ದಾರೆ. ಅಲ್ಲದೆ ಯಾರು ಶವ ಅಂತ ಅನ್ನಬೇಡಿ, ಚಂದ್ರು ಅಂತ ಕರೀರಿ. ಚಂದ್ರು ನನ್ನ ಕರ್ಕೊಳೋ, ನೀನಿಲ್ಲದ ಜೀವ ಹೇಗೆ ಇರ್ಲೋ ಎಂದು ಗೋಳಾಡಿದ್ದಾರೆ.

ನಮ್ಮ ಮನೆಯ ದೀಪ ಹಚ್ಚುತ್ತಿದ್ದೆ ನೀನು. ಅಲ್ಲದೆ ನನ್ನ ಶವಕ್ಕೆ ನೀನು ಬೆಂಕಿ ಇಡಬೇಕಿತ್ತು ಎಂದು ಹೇಳುತ್ತಾ ತಮ್ಮ ಮಗನನ್ನು ಅಪ್ಪಿಕೊಂಡು ರೇಣುಕಾಚಾರ್ಯ ಕಣ್ಣೀರಾಗಿದ್ದು, ನೆರೆದವರ ಕಣ್ಣಲ್ಲೂ ನೀರು ತರಿಸುವಂತಿತ್ತು.

ಚಂದ್ರಶೇಖರ್‌ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲೇ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರು ಪತ್ತೆಯಾದ ವಿಚಾರ ತಿಳಿದು ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.

ಇದಕ್ಕೂ ಮೊದಲು ಸ್ಥಳೀಯ ನಿವಾಸಿಗಳು ಕಾಲುವೆಯಲ್ಲಿ ಕಾರು ಬಿದ್ದಿದೆ ಎಂಬ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕ್ರೇನ್‌ ಮೂಲಕ ಕಾರನ್ನು ಮೇಲಕ್ಕೆ ಎತ್ತಿದ್ದಾರೆ.

ಕಾರಿನ ಏರ್‌ ಬ್ಯಾಗ್‌ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ. ಮುಂಭಾಗದ ಗಾಜು ಒಡೆದಿದ್ದರೆ ಹಿಂಭಾಗದಲ್ಲಿ ಕಾರು ನಜ್ಜುಗುಜ್ಜಾಗಿದೆ. ಹೀಗಾಗಿ ಇದು ಅಪಘಾತವೇ ಅಥವಾ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದ್ಯಾ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಲು ಸಜ್ಜಾಗುತ್ತಿದ್ದಾರೆ.

Leave a Reply

error: Content is protected !!
LATEST
BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ