ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ.
ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ಶನಿವಾರ ತಡರಾತ್ರಿ 12:01 ಗಂಟೆ ಸುಮಾರಿಗೆ ಭೈರವೈಕ್ಯರಾಗಿದ್ದಾರೆ.
ಸ್ವಾಮೀಜಿಗಳ ಅಂತಿಮ ದರ್ಶನವನ್ನು ಶನಿವಾರ ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದ್ದು, ಮಧ್ಯಾಹ್ನ 3ರವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಿಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಶ್ರೀಗಳ ಉತ್ತರಾಧಿಕಾರಿಗಳಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಅಂತ್ಯಕ್ರಿಯೆಯ ವಿಧಿ ವಿಧಾನಗಳನ್ನು ನೇರವೇರಿಸಲಿದ್ದಾರೆ.
Related

Megha