NEWSದೇಶ-ವಿದೇಶನಮ್ಮರಾಜ್ಯ

ಶಶಿ ಸ್ಪರ್ಷಿಸಿ ವಿಕ್ರಮ ಸಾಧಿಸಿದ ಚಂದ್ರಯಾನ -3 : ವಿಶ್ವಕ್ಕೆ ಐತಿಹಾಸಿಕ ಸಂದೇಶ ರವಾನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯ ಫಲವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.03ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಐತಿಹಾಸಿಕ ಸಂದೇಶ ಸಾರಿತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿದ್ದ ಈ ಅತ್ಯಂತ ಮಹತ್ವದ ಸಾಹಸಕ್ಕೆ ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುತ್ತಿತ್ತು. ಈ ಅದ್ಭುತವನ್ನು ಸಾಧಿಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟ್ರಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ವಿಶ್ವದಲ್ಲೇ ಇತರ ದೇಶಗಳು ಮಾಡದ ಸಾಧನೆಯನ್ನು ಮಾಡಿದ್ದು, ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ.

ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಸದ್ಯ ಹೊರಹೊಮ್ಮಿದ್ದು, ಈ ಕ್ಷಣವನ್ನು ಕಣ್ತುಂಬಿಕೊಂಡ ದೇಶದ ಪ್ರದಾನಿ ನರೇಂದರ ಮೋದಿ ಅವರು ಇಸ್ರೋ ಸಾಧನೆಯನ್ನು ಹಾಕಿ ಹೊಗಳಿದರು.

ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ ಐಒ, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಹಗುರವಾಗಿ ಶಶಿಯ ನೆಲವನ್ನು ಸ್ಪರ್ಶಿಸುವ ಮೂಲಕ ಇತಿಹಾಸ ನಿರ್ಮಿಸಿತು.

ವಿಕ್ರಂ ಸುರಕ್ಷಿತವಾಗಿ ಚಂದಮಾಮನ ಅಂಗಳವನ್ನು ತಲುಪಿ ವಿಶ್ವದಲ್ಲಿ ವಿಕ್ರಮ ಸ್ಥಾಪಿಸಿದ ಗರಿಮೆಯನ್ನು ಇಸ್ರೋ ಪಾಲಿಗೆ ಒದಗಿ ಕೊಟ್ಟಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್‌ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ.

ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಈ ಮೂಲಕ ಸೇರಿದ ಗರಿಮೆ ಭಾರತತ್ತದಾಗಿದೆ. ಅಲ್ಲದೆ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆ ಪಡೆದುಕೊಂಡಿದೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು