NEWSನಮ್ಮಜಿಲ್ಲೆರಾಜಕೀಯ

ಮೈಸೂರು ಜಿಲ್ಲಾ ಜನರ ಸಮಸ್ಯೆಗೆ ಸ್ಪಂದಿಸದ ಉಸ್ತುವಾರಿ ಸಚಿವರ ಬದಲಾಯಿಸಿ: ಕುರುಬೂರು ಶಾಂತಕುಮಾರ್ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಮೂಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲೆಯ ಜನರ ಸಮ್ಯೆಗೆ ಸ್ಪಂದಿಸುತ್ತಿಲ್ಲ ಹೀಗಾಗಿ ಅವರನ್ನು ಕೂಡಲೇ ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ, ಚಿರತೆ ಹಾಗೂ ಹುಲಿಗಳಿಂದ ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕಾಲ ಹರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿಬೇಕು. ಅಲ್ಲಿವ ಪ್ರಸ್ತು ವಸ್ತುಸ್ಥಿತಿ ನೋಡಿ ಅಧಿಕಾರಿಗಳ ಜತೆ ಚರ್ಚಿಸಿ ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚುರುಕು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಹೀಗೆ ಮಾಡದಿರುವುದರಿಂದ ಈಗ ಹೋಗಿರುವ ಜೀವಗಳ ಜತೆಗೆ ಮತ್ತಷ್ಟು ಜೀವಗಳು ಕಾಡು ಪ್ರಾಣಿಗಳಿಗೆ ಬಲಿಯಾಗಲಿವೆ. ಆ ರೀತಿ ಆಗಲಿ ಎಂದು ಕಾಯುತ್ತಿದ್ದಾರಾ ಸಚಿವರು ಎಂದು ಪ್ರನಿಸಿದ್ದಾರೆ. ಇನ್ನು ಬಾಲಕರು, ಮಹಿಳೆಯರು, ರೈತರು, ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ.

ಸಂಜೆ 6ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ. ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ. ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು