ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ (Check Bounce Case) ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ನೀಡಿ ಕೋರ್ಟ್ ಅದೇಶ ಹೊರಡಿಸಿದೆ.
ಹೂವಪ್ಪಗೌಡ ಎಂಬುವರಿಂದ ಶಾಸಕ ಕುಮಾರಸ್ವಾಮಿ ಅವರು 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್‌ಗಳನ್ನು ಹೂವಪ್ಪಗೌಡ ಅವರಿಗೆ ನೀಡಿದ್ದರು. ಆದರೆ ಈ ಎಲ್ಲ ಚೆಕ್‌ಗಳು ಬೌನ್ಸ್ ಆಗಿದ್ದು ಈ ಸಂಬಂಧ ಅವರು ಕೋರ್ಟ್‌ಮೊರೆ ಹೋಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಕೇಸ್ ದಾಖಲಾಗಿ, ಬಳಿಕ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಜೆ.ಪ್ರೀತ್ ಅವರ ನ್ಯಾಯಪೀಠ ಶಿಕ್ಷೆಯ ತೀರ್ಪು ಪ್ರಕಟಿಸಿದೆ. 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.