CrimeNEWSನಮ್ಮಜಿಲ್ಲೆ

ಚೆಕ್ ಬೌನ್ಸ್‌ ಪ್ರಕರಣ : ಆರೋಪಿಯ ಮೇಲ್ಮನವಿ ವಜಾಗೊಳಿಸಿದ ಜಿಲ್ಲಾ ಕೋರ್ಟ್‌ – 6 ತಿಂಗಳ ಜೈಲು, 5.5 ಲಕ್ಷ ರೂ., ದಂಡ ಪಾವತಿಗೆ ಆದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ಚೆಕ್ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಕೆಳಹಂತದ ನ್ಯಾಯಾಲಯದ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.

ಸುಖ್ಯದ ಅಜ್ಜಾವರ ಗ್ರಾಮದ ಕಾಂತಮಂಗಲದ ಕೆ. ಶಶಿಧರ ಎಂಬುವರಿಗೆ ಕೊಡಬೇಕಾದ 5.5 ಲಕ್ಷ ರೂಪಾಯಿ ಸಾಲದ ಹಣದ ಮರುಪಾವತಿಗಾಗಿ ಸುಳ್ಯ ನಗರದ ಕುರುಂಜಿಭಾಗ್ ನಲ್ಲಿರುವ ಸುದೇಶ್ ಸುವರ್ಣ ಅವರು ಚೆಕ್ ಮೂಲಕ ನೀಡಿದ್ದರು. ಈ ಚೆಕ್‌ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಸುಳ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ 2018 ರಲ್ಲಿ ದಾಖಲಾಗಿತ್ತು.

ಅದರ ವಿಚಾರಣೆ ನಡೆಸಿದ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯವು ಸುದೇಶ್ ಸುವರ್ಣ ಅವರ ಮೇಲೆ ದಾಖಲಿಸಿದ ಚೆಕ್ ಅಮಾನ್ಯ ಪ್ರಕರಣವು ಸಾಬೀತಾಗಿ ಆರೋಪಿಗೆ ಆರು ತಿಂಗಳ ಸಾದಾ ಸೆರೆಮನೆ ವಾಸ ಹಾಗೂ 5.5 ಲಕ್ಷ ರೂ. ಮೊಬಲಗನ್ನು ಬಡ್ಡಿ ಹಾಗೂ ದಂಡ ಸಹಿತ ಪಾವತಿ ಮಾಡುವಂತೆ ಆದೇಶಿಸಿತ್ತು.

ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಸುದೇಶ್ ಸುವರ್ಣ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ದಾಖಲಿಸಿದ್ದರು. ಪುತ್ತೂರಿನ ಜಿಲ್ಲಾ ನ್ಯಾಯಾಲಯ ಮೇಲ್ಮನವಿ ಕೈಗೆತ್ತುಕೊಂಡು ವಿಚಾರಣೆ ನಡೆಸಿತು. ಈ ವೇಳೆ ಉಭಯ ಪಕ್ಷಕಾರರ ವಾದವನ್ನು ಆಲಿಸಿ, ದಾಖಲಿಸಿದ ಮೇಲ್ಮನವಿಯನ್ನು ವಜಾಗೊಳಿಸಿತು.

ಅಲ್ಲದೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ಸುದೇಶ್ ಸುವರ್ಣ ಅವರ ವಿರುದ್ಧ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಈ ಮೂಲಕ ಚೆಕ್ ಬೌನ್ಸ್‌ ಪ್ರಕರಣ ಸಾಬೀತಾಗಿರುವುದನ್ನು ಪುರಸ್ಕರಿಸಿ ಮೇಲ್ಮನವಿಯನ್ನು ವಜಾಗೊಳಿಸಿದೆ.

ಸುಳ್ಯ ಹಿರಿಯ ನ್ಯಾಯಾಲಯದಲ್ಲಿ ಹಾಗೂ ಪುತ್ತೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಶಶಿಧರ್ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಪಿ. ಭಾಸ್ಕರ ರಾವ್ ಹಾಗೂ ಅಶ್ವಿನಿ ಕುಮಾರ್ ಪಿ. ವಾದ ಮಂಡಿದ್ದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ