ಮತದಾರರ ಪಟ್ಟಿ ಪರಿಶೀಲಿಸಿ ಸರಿಪಡಿಸಿಕೊಳ್ಳುವುದಿದ್ದಲ್ಲಿ ಕೂಡಲೆ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಸೂಚನೆ
ಬೆಂಗಳೂರು: ಬಿಬಿಎಂಪಿ ಕರಡು ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳ ಪರಿಶೀಲನೆ ಹಾಗೂ ಕರಡು ಮತದಾರ ಪಟ್ಟಿಯನ್ನು ಸಿದ್ದಪಡಿಸಿರುವ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದು ಪೂರ್ವ ವಲಯದ ಶಿವಾಜಿನಗರ, ಪುಲಕೇಶಿ ನಗರ ಹಾಗೂ ಶಾಂತಿನಗರ ವಿಧಾನಸಾಭಾ ಕ್ಷೇತ್ರಗಳಲ್ಲಿ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರಡು ಮತದಾರ ಪಟ್ಟಿಯ ಬಗ್ಗೆ ಹಾಗೂ ವಾರ್ಡ್ ವಾರು ಗಡಿ ರೇಖೆ ಗುರುತಿಸಿರುವ ಬಗ್ಗೆ ರಾಜಕೀಯ ಪಕ್ಷಗಳು/ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ಒದಗಿಸಬೇಕು. ಜೊತೆಗೆ ಮತದಾರರ ಪಟ್ಟಿಯ ಬಗ್ಗೆ ಏನಾದರು ಆಕ್ಷೇಪಣೆಗಳು ಬಂದಲ್ಲಿ ಕೂಡಲೆ ಅದನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳುವುದಿದ್ದಲ್ಲಿ ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರಡು ಮತದಾರರ ಪರಿಷ್ಕರಣೆ ಮಾಡುತ್ತಿರುವ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಬೇಕು. ಈ ಸಂಬಂಧ ಮತದಾರ ನೋಂದಣಾಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಂಡು ನಾಗರಿಗೆ ಮಾಹಿತಿಯನ್ನು ತಿಳಿಸಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ದೂರುಗಳು ಬರಬಾರಂತೆ ಈಗಲೇ ಮತದಾರರ ಪಟ್ಟಿಯನ್ನು ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಒಂದೇ ಕುಟುಂಬದ ಮತಗಳು ಗಡಿಭಾಗದಲ್ಲಿ ಎರಡು ವಾರ್ಡ್ ಗೆ ಬೇರ್ಪಡದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಆ ರೀತಿ ಬೇರ್ಪಟ್ಟಿದ್ದಲ್ಲಿ ಕೂಡಲೆ ಅದನ್ನು ಸರಿಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರುಗಳಿವೆಯೇ/ಇಲ್ಲವೇ ಎಂಬುದನ್ನು ಕೂಡಾ ಪರಿಶೀಲಿಸಿಕೊಳು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಅಪರ ಜಿಲ್ಲಾ ಚುನಾವಣಾ ಅಧಿಕಾರಿ(ಕೇಂದ್ರ) ಹಾಗೂ ವಿಶೇಷ ಆಯುಕ್ತರಾದ ರಂಗಪ್ಪ, ವಲಯ ಆಯುಕ್ತರಾದ ರವೀಂದ್ರ, ವಲಯ ಜಂಟಿ ಆಯುಕ್ತರಾದ ಶಿಲ್ಪಾ, ಸಹಾಯಕ ಆಯುಕ್ತರಾದ ಉಮೇಶ್, ಇ.ಆರ್.ಒ ಹಾಗೂ ಇನ್ನಿತರೆ ಸಂಬAಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.