NEWSಉದ್ಯೋಗನಮ್ಮರಾಜ್ಯ

ಆಸಿಡ್‌ ದಾಳಿಗೆ ಒಳಗಾದ ಸಂತ್ರಸ್ತೆಗೆ ಕೆಲಸ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿದ್ದ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಾಳಿಗೆ ಒಳಗಾಗಿರುವ ಯುವತಿ, ಸ್ನಾತಕೋತ್ತರ ಪದವೀಧರೆಯಾಗಿದ್ದು, ಸದ್ಯ ಬಡತನದ ನಡುವೆ ತನ್ನ ಪಾಲಕರೊಂದಿಗೆ ದಿನ ದೂಡುತ್ತಿದ್ದಾರೆ.

ಇನ್ನು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಆ ವೇಳೆ ಸಿಎಂ ಸಂತ್ರಸ್ತೆಯ ಅಹವಾಲನ್ನು ಆಲಿಸಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ. (M.Com) ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಹಿಂದಿನ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು: ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದರು.

ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

Leave a Reply

error: Content is protected !!
LATEST
KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ