NEWSದೇಶ-ವಿದೇಶಶಿಕ್ಷಣ-

ರಾಜ್ಯ ಬಜೆಟ್‌: ಎಲ್ಲ ಫ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮುಖ್ಯಮಂತ್ರಿ ವಿದ್ಯಾಶಕ್ತ ಯೋಜನೆ

ವಿಜಯಪಥ ಸಮಗ್ರ ಸುದ್ದಿ

ಕರ್ನಾಟಕ ರಾಜ್ಯ ಬಜೆಟ್‌ 2023-24: ಎಲ್ಲ ಫ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುವು ಮಾಡಿಕೊಡಲು ಮುಖ್ಯಮಂತ್ರಿ ವಿದ್ಯಾಶಕ್ತ ಯೋಜನೆ ಪ್ರಾರಂಭ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಘೊಷಿಸಿದ್ದಾರೆ.

ಅದರ ಜತೆಗೆ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ. ಈ ಉಚಿತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

35 ಸಾವಿರ ನೋಂದಾಯಿತ ಗೃಹರಕ್ಷಕರಿಗೆ ಪ್ರಸ್ತುತ ಪ್ರತಿ ದಿನಕ್ಕೆ ನೀಡುತ್ತಿರುವ ಕರ್ತವ್ಯಭತ್ಯೆ 100 ರೂ. ನಷ್ಟು ಹೆಚ್ಚಳ.

ಬೀದಿ ನಾಯಿಗಳ (Street Dogs) ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಉತ್ತರ ಕನ್ನಡ ಜಿಲ್ಲೆ ಜನರ ಬಹುದಿನಗಳ ಕನಸು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊನೆಗೂ ನನಸಾಗಿದ್ದು, ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡಲಾಗಿದೆ.

ರಾಜ್ಯದ ಸಾರಿಗೆ ಇಲಾಖೆಯ ವಾಹನ ಹಾಗೂ ಸಾರಥಿ ಸೇವೆಗೆ ಸಂಬಂಧಿಸಿದ ಸೇವೆಗಳನ್ನು 31 ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ರಹಿತವಾಗಿ ಒದಗಿಸಲಾಗುತ್ತಿದೆ.

ಅಲ್ಲದೇ, ಕೇಂದ್ರ ಸರ್ಕಾರದ ಮಾದರಿಯಲ್ಲಿ ನೋಂದಾಯಿತ ವಾಹನಗಳ ನಾಶಪಡಿಸುವಿಕೆ ನೀತಿ-2022’ನ್ನು (Registered Vehicle Scrapping Policy-2022) ಜಾರಿಗೊಳಿಸಿದೆ. ಕೇಂದ್ರದ ಸಹಭಾಗಿತ್ವದಲ್ಲಿ 22 ಕೋಟಿ ರೂ. ವೆಚ್ಚದಲ್ಲಿ Vehicle Location Tracking System (VLTS) ಅನುಷ್ಠಾನಗೊಳಿಸಲಾಗುತ್ತಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ