NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸಿಬ್ಬಂದಿಗಳ ವರ್ಗಾವಣೆಗೆ ತಡೆ ನೀಡಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಪ್ರಯಾಣಿಕರ ಜನದಟ್ಟಣೆ ಸಮಯ ಆರಂಭವಾಗಿರುವುದರಿಂದ ಸಿಬ್ಬಂದಿಗಳ ಅಗತ್ಯತೆ ಅವಶ್ಯವಿದೆ. ಹೀಗಾಗಿ ವಿಭಾಗದ ಸಿಬ್ಬಂದಿಗಳ ಅಂತರಿಕ ವರ್ಗಾವಣೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ -ಸಿಪಿಎಂ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗ ಮಟ್ಟದ ಸಿಬ್ಬಂದಿಗಳ ವರ್ಗಾವಣೆಯನ್ನು ತಡೆಹಿಡಿಯುವಂತೆ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಮಾ.12ರಂದು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಪ್ರಯಾಣಿಕರ ಜನದಟ್ಟಣೆ ಸಮಯ ಆರಂಭವಾಗಿರುವುದರಿಂದ ಸಿಬ್ಬಂದಿಗಳ ಅಗತ್ಯತೆ ಅವಶ್ಯವಿದೆ. ಹೀಗಾಗಿ ವಿಭಾಗದ ಸಿಬ್ಬಂದಿಗಳ ಅಂತರಿಕ ವರ್ಗಾವಣೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಅನಿವಾರ್ಯ ತುರ್ತು ಸಂದರ್ಭಗಳಲ್ಲಿ ಹಾಗೂ ಅಮಾನತಿನಿಂದ ತೆರವುಗೊಂಡ ಪ್ರಕರಣಗಳಲ್ಲಿ ಮಾತ್ರ ಆಡಳಿತಾತ್ಮಕ ವರ್ಗಾವಣೆ ಮಾಡಲು ಅನುಮತಿಸಿದ್ದು, ಉಳಿದಂತೆ ಯಾವುದೇ ವರ್ಗಾವಣೆಯನ್ನು ಮಾಡುವ ಮೊದಲು ಖಡ್ಡಾಯವಾಗಿ ಕೇಂದ್ರ ಕಚೇರಿಯ ಪೂರ್ವಾನುಮತಿ ಪಡೆಯುವಂತೆ ಸಕ್ಷಮ ಪ್ರಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಇದರಂತೆ, ಎಲ್ಲ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟವರೆಲ್ಲರು ಈ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ