
ಚಿಕ್ಕಬಳ್ಳಾಪುರ: ಖಾಸಗಿ ಬಸ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಹೊತ್ತಿ ಉರಿದಿದ್ದು, ಈ ವೇಳೆ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಸಜೀವ ದಹನವಾಗಿದ್ದು ಮೂವರು ಗ್ರೇಟ್ ಎಸ್ಕೇಪ್ ಆಗಿದ್ದಾರೆ.
Advertisemet
ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಈ ಅವಘಡ ನಡೆದಿದ್ದು, ಅಪಘಾತದಲ್ಲಿ ಆಂಧ್ರಪದೇಶದ ಮದನಪಲ್ಲಿಯ ನಿವಾಸಿಗಳು ಸಜೀವ ದಹನವಾಗಿರುವವರು. ಅವರಲ್ಲಿ ಒಬ್ಬ ಮಹಿಳೆ ಹಾಗೂ ಪುರುಷ ಸಜೀವ ದಹನವಾಗಿದ್ದಾರೆ. ಆದರೆ ಇನ್ನು ಗುರುತು ಪತ್ತೆಯಾಗಿಲ್ಲ.
ಇನ್ನು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಬಚಾವಾಗಿದ್ದಾರೆ.
ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟರಲ್ಲೇ ಇಬ್ಬರು ಸಜೀವ ದಹನವಾಗಿದ್ದರು. ಈ ಘಟನೆ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.