NEWSನಮ್ಮರಾಜ್ಯರಾಜಕೀಯಶಿಕ್ಷಣ-

ಶಿಕ್ಷಣ ಇಲಾಖೆಯಲ್ಲಿನ 40% ಭ್ರಷ್ಟಾಚಾರಕ್ಕೆ ರಾಜ್ಯದ ಮಕ್ಕಳು ಬೆಲೆ ತೆರುತ್ತಿದ್ದಾರೆ – ಕುಶಲ ಸ್ವಾಮಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾನ್ಯತೆ ನವೀಕರಣ ಆರ್‌ಟಿಇ , ಶುಲ್ಕ ಮರುಪಾವತಿ ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂಬ ಸಾಕ್ಷ್ಯಾಧಾರ ಸಮೇತ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಮಹಿಳಾ ಅಧ್ಯಕ್ಷೆ ಕುಶಲ ಸ್ವಾಮಿ ಆರೋಪ ಮಾಡಿದ್ದಾರೆ.

ಇಂದು ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ತಿಂಗಳುಗಳಿಂದ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸಾಕಷ್ಟು ಆರೋಪಗಳನ್ನು ಮಾಡುತ್ತಿದ್ದಾರೆ.

ಅದರ ಜತೆಗೆ ಇದೀಗ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟವು ಸಹ 40 % ಕಮೀಷನ್ ಭ್ರಷ್ಟಾಚಾರದಿಂದಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ದುರವಸ್ಥೆಗೆ ತಲುಪಿದೆಯೆಂದು ಇತ್ತೀಚೆಗೆ ಪ್ರಧಾನಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ ಎಂದು ವಿವರಿಸಿದರು.

ಇನ್ನು ಕಣ್ಣು ಕಿವಿ ಕೇಳಿಸದ ಸರ್ಕಾರದ 40% ಭ್ರಷ್ಟಾಚಾರದಿಂದಾಗಿ ಇಂದು ರಾಜ್ಯದ ಅಮಾಯಕ ಮಕ್ಕಳು ತಮ್ಮ ಶಿಕ್ಷಣಕ್ಕಾಗಿ ದುಬಾರಿ ಬೆಲೆಯನ್ನು ತೆರುತ್ತಿರುವುದು ದುರಂತದ ವಿಷಯವೆಂದು ಕುಶಲ ಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಹಾಳುಗೆಡವಿದೆ. ವಿಧಿ ಇಲ್ಲದೆ ರಾಜ್ಯದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದುಬಾರಿ ಶಾಲಾ ಶುಲ್ಕಗಳನ್ನು ವರ್ಷ ವರ್ಷವೂ ಕಟ್ಟಿಕಟ್ಟಿ ಸರ್ಕಾರದ ಭ್ರಷ್ಟಾಚಾರ ನೀತಿಯಿಂದಾಗಿ ಬದುಕೇ ದುರ್ಬರವಾಗುತ್ತಿರುವುದು ಕಟುವಾಸ್ತವ ವಿಚಾರವಾಗಿದೆ. ಬಿಜೆಪಿ ಸರ್ಕಾರದ ಲಂಚಕೋರತನ , ದುರಾಡಳಿತಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಕುಶಲ ಸ್ವಾಮಿ ಮಾರ್ಮಿಕವಾಗಿ ಹೇಳಿದರು.

ಬಿಜೆಪಿಯವರು ರಾಜ್ಯದಲ್ಲಿ ಅನೈತಿಕ ಸರ್ಕಾರವನ್ನು ನಡೆಸಿ ರಾಜ್ಯದ ಖಜಾನೆಯನ್ನು ಲೂಟಿ ಹೊಡೆಯುವ ಪ್ರಕ್ರಿಯೆಯಲ್ಲಿ ಇದೀಗ ಶಿಕ್ಷಣ ಕ್ಷೇತ್ರವನ್ನು ಸಹ ಬಿಡದೆ ರಾಜ್ಯದ ವಿದ್ಯಾರ್ಥಿಗಳನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನು ಈ ಬಗ್ಗೆ ಆಮ್ ಆದ್ಮಿ ಪಕ್ಷವು ತೀವ್ರ ಚಿಂತನೆಯನ್ನು ನಡೆಸಿ ಸರ್ಕಾರ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಸುತ್ತಿರುವ ಅವ್ಯವಹಾರಗಳನ್ನು ತಡೆಗಟ್ಟುವ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯೋನ್ಮುಖರಾಗುತ್ತಿದ್ದೇವೆ ಹಾಗೂ ರಾಜ್ಯದ ಮನೆಮನೆಗಳಿಗೂ ಸರ್ಕಾರದ ಭ್ರಷ್ಟಾಚಾರ ನೀತಿಯನ್ನು ತಲುಪಿಸುತ್ತೇವೆ ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಹಿಳಾ ನಾಯಕಿ ಮರಿಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC