NEWSನಮ್ಮಜಿಲ್ಲೆನಮ್ಮರಾಜ್ಯಶಿಕ್ಷಣ-

ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗಲು ಸಾಧ್ಯ : ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೀಟ್‌ ವ್ಯವಸ್ಥೆ ದೇಶವನ್ನು 30 ವರ್ಷ ಹಿಂದಕ್ಕೆ ಕರೆದುಕೊಂಡು ಹೋಗುತ್ತಿದೆ. ನಮ್ಮ ರಾಜ್ಯದಲ್ಲಿದ್ದ ಸಿಇಟಿ ಮುಖಾಂತರ ರಾಜ್ಯದಲ್ಲಿ ಮೂಲೆ ಮೂಲೆಗಳಿಂದ ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹತೆ ಪಡೆಯುತ್ತಿದ್ದರು. ಆದರೆ ನೀಟ್‌ನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಹಗರಣದ ವಿರುದ್ಧ ಆಮ್ ಆದ್ಮಿ ಪಾರ್ಟಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಕಳೆದ ಐದಾರು ವರ್ಷದಲ್ಲಿ ನೀಟ್‌ನಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಮೊದಲ ರ್‍ಯಾಂಕ್ ಪಡೆಯುತ್ತಿದ್ದರೆ ಈ ಬಾರಿ 67 ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದಾರೆ. ಈ ಬಾರಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದರು.

ನೀಟ್ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ನಮ್ಮ ನಾಡಿನ ಮೆಡಿಕಲ್ ಕಾಲೇಜುಗಳು ನಮ್ಮ ಮಕ್ಕಳಿಗೆ ಇರಬೇಕು, ನೀಟ್ ಪರೀಕ್ಷೆಯಲ್ಲಿ ಒಂದೇ ಕೊಠಡಿಯಲ್ಲಿ ಆರು ಮಕ್ಕಳು 720 ಕ್ಕೆ 720 ಅಂಕ ಪಡೆಯುತ್ತಾರೆ ಎಂದರೆ ಇದು ಅಕ್ರಮವಲ್ಲದೆ ಇನ್ನೇನು ಎಂದರು.

ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಸಮಿತಿ ರಚನೆ ಮಾಡಿ, ನಮ್ಮ ರಾಜ್ಯಕ್ಕೆ ನೀಟ್ ಅವಶ್ಯಕತೆ ಇಲ್ಲ ಎಂದು ಕಾನೂನಾತ್ಮಕವಾಗಿ ಹೋರಾಟ ಮಾಡಲಿ. ನೀಟ್‌ನಿಂದ ರಾಜ್ಯಕ್ಕೆ ವಿನಾಯಿತಿ ಸಿಗುವ ಮಸೂದೆಯನ್ನು ಅಂಗೀಕರಿಸಲಿ. ಪಿಯುಸಿ ಮತ್ತು ಸಿಇಟಿಯಲ್ಲಿ ಪಡೆಯುವ ಅಂಕಗಳನ್ನು ಮಾತ್ರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮಾನದಂಡವಾಗಿ ಪರಿಗಣಿಸಲಿ.

ರಾಜ್ಯದ ಎಲ್ಲಾ ಶಾಸಕರು, ಸಂಸದರು ಲೋಕಸಭೆ ಮುಂದೆ ಹೋರಾಟ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ. ಎಲ್ಲರೂ ನೀಟ್ ವಿರುದ್ಧ ದನಿ ಎತ್ತಬೇಕು. ಅದರಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮೋಹನ್ ದಾಸರಿ ಹೇಳಿದರು.

ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಕಳೆದ 15-20 ದಿನಗಳಿಂದ ಇಡೀ ದೇಶ ಈ ಹಗರಣದ ಬಗ್ಗೆ ಮಾತನಾಡುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ಇದರ ಬಗ್ಗೆ ಪ್ರಶ್ನೆ ಮಾಡಿದೆ. ಆದರೂ ಕೂಡ, ಕೇಂದ್ರ ಸಚಿವರು ಮಾತ್ರ ಯಾವುದೇ ಹಗರಣ ಎಂದು ಹೇಳುತ್ತಲೇ ಇದ್ದಾರೆ. ಇವರಂತಹ ಭ್ರಷ್ಟರು ಮತ್ತೆಲ್ಲೂ ಇರಲು ಸಾಧ್ಯವಿಲ್ಲ ಎಂದರು.

‘ನೀಟ್ ಇಂದ ರಾಜ್ಯದ ಮಕ್ಕಳಿಗೆ ಅನ್ಯಾಯ ಮಾಡುತ್ತಿರುವ ಮೋದಿ ಸರ್ಕಾರಕ್ಕೆ ಧಿಕ್ಕಾರ’, ‘ನೀಟ್ ಒಕ್ಕೂಟ ವ್ಯವಸ್ಥೆ ವಿರೋಧಿ’, ‘ನೀಟ್ ಹಗರಣದಲ್ಲಿ ಭಾಗಿಯಾದ ಮೋದಿ ಸರ್ಕಾರಕ್ಕೆ ಧಿಕ್ಕಾರ’ ಎನ್ನುವ ಘೋಷಣೆಗಳನ್ನು ಕೂಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್