NEWSಆರೋಗ್ಯನಮ್ಮರಾಜ್ಯ

ನ್ಯೂ ಇಯರ್​ ಪಾರ್ಟಿಗೆ ಮಕ್ಕಳು, ಗರ್ಭಿಣಿಯರಿಗೆ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಬಾರಿ ಹೊಸ ವರ್ಷದ ಸಂಭ್ರಮಕ್ಕೆ ಕೊರೊನಾ ಕರಿ ನೆರಳು ಆವರಿಸಿದ್ದು, ರಾಜ್ಯ ಸರ್ಕಾರ ಕೊರೊನಾ ರೂಲ್ಸ್​ ಜಾರಿ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆಯೂ ಮಾಸ್ಕ್​​ ಧರಿಸೋದು ಕಡ್ಡಾಯವಾಗಿದೆ.

ಅಷ್ಟೇ ಅಲ್ಲ, ರಾಜ್ಯಾದ್ಯಂದ ನ್ಯೂ ಇಯರ್​ ಪಾರ್ಟಿಗೆ ಮಕ್ಕಳು ಮತ್ತು ಗರ್ಭಿಣಿಯರಿಗೆ ನಿಷೇಧ ಹೇರಲಾಗಿದೆ. ಉಳಿದಂತೆ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಕೊರೊನಾ ರೂಲ್ಸ್​ ಪಾಲಿಸಬೇಕು. ಮಾಸ್ಕ್​ ಧರಿಸಿಯೇ ಇರಬೇಕು.

ಕೋವಿಡ್ ನಿಯಂತ್ರಣಾ ಕುರಿತು ತಜ್ಞವೈದ್ಯರ ತಂಡದೊಂದಿಗೆ ಚರ್ಚಿಸಲಾಗಿದ್ದು ಚೀನಾ ಮತ್ತು ಬೇರೆ ಬೇರೆ ದೇಶದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಆರ್​. ಅಶೋಕ್ ತಿಳಿಸಿದ್ದಾರೆ.

ಇನ್ನು ರಾಜ್ಯದ ಸಿನಿಮಾ ಥಿಯೇಟರ್​ಗಳಲ್ಲಿ ಮಾಸ್ಕ್​ ಧರಿಸಿವುದು ಕಡ್ಡಾಯ. ಶಾಲಾ-ಕಾಲೇಜುಗಳ ತರಗತಿಯೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ವಿಮಾನದಲ್ಲಿ ಬರುವ ಪ್ರಯಾಣಿಕರ ತಪಾಸಣೆಗಾಗಿ ಮಂಗಳೂರಿನ ವೆನ್​ಲಾಕ್​ ಮತ್ತು ಬೆಂಗಳೂರಿನ ಬೌರಿಂಗ್​​​ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಬ್​, ಕ್ಲಬ್​, ಬಾರ್​ಗಳಲ್ಲೂ ಮಾಸ್ಕ್​ ಕಡ್ಡಾಯ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬರಿಗೂ ಸ್ಯಾನಿಟೈಸರ್​ ಬಳಕೆ ಕಡ್ಡಾಯ. ರೆಸಾರ್ಟ್​ಗಳಲ್ಲಿ ಕೊರೊನಾ ರೂಲ್ಸ್​ಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಬಾರ್​​ ಸಿಬ್ಬಂದಿ ಮಾತ್ರವಲ್ಲ ಬಾರ್​ಗೆ ಬರೋ ಗ್ರಾಹಕರಿಗೂ ಡಬಲ್​​ ಡೋಸ್​ ಹಾಕಿಸಿಕೊಂಡಿರಬೇಕು. ಈ ರೂಲ್ಸ್​ ಪಾರ್ಟಿಗಳಿಗೂ ಅನ್ವಯ ಎಂದು ಅಶೋಕ್​ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ