Search By Date & Category

NEWSರಾಜಕೀಯ

ಅಧಿಕಾರದ ಆಸೆಯಿಂದ ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಚಿಂಚನಸೂರ್: ಕಂದಾಯ ಸಚಿವ ಅಶೋಕ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಮುಂದಾಗಿರುವ ಬಾಬೂರಾವ್ ಚಿಂಚನಸೂರ್ ಅವರಿಗೆ ಅಧಿಕಾರದ ಆಸೆ ಹೆಚ್ಚಾಗಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಚನಸೂರ್‌ಗೆ ಅಧಿಕಾರದ ಮೇಲೆ ಆಸೆ. ಹೀಗಾಗಿ ಅವರ ಮಾತಿಗೆ ಯಾವುದೇ ಬೆಲೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಬಿಜೆಪಿಗೆ ಬಂದಿದ್ದಾಗೆ ಹೇಳಿದ್ದರು. ಎಂಎಲ್‌ಸಿ ಆದರೂ ವಿಧಾನಸಭೆ ಟಿಕೆಟ್ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಚಿಂಚನಸೂರ್ ಮಾತಿನ ಮೇಲೆ ನಿಲ್ಲಲ್ಲ ಎಂದು ವಾಗ್ದಾಳಿ ನಡೆಸಿ, ಬಿಜೆಪಿಯಲ್ಲಿ ಎಂಎಲ್‌ಸಿ ಮಾಡಿದ್ದರು ಅವರು ಪಕ್ಷ ತೊರೆಯುತ್ತಾರೆ ಎಂದರೆ ಅವರ ನಡೆಯ ಬಗ್ಗೆ ನಾವು ಏನನ್ನು ಹೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜನಗರದಿಂದ ಸಚಿವ ವಿ.ಸೋಮಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅಶೋಕ್, ನಿನ್ನೆ ಸಂಜೆ ಸೋಮಣ್ಣ ಕರೆ ಮಾಡಿದ್ದರು, ನಿಮ್ಮ ಜತೆ ಮಾತಾಡಬೇಕೆಂದರು ಆ ವೇಳೆ ಚಾಮರಾಜನಗರಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಅವರು ಅಲ್ಲಿ ಸ್ಪರ್ಧಿಸಿದರೂ ಬಿಜೆಪಿಯಿಂದಲೇ ಸ್ಪರ್ಧಿಸುತ್ತಾರೆ ಎಂದು ವಿವರಿಸಿದರು.

Leave a Reply

error: Content is protected !!