NEWSನಮ್ಮಜಿಲ್ಲೆನಮ್ಮರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಬಂದ್ – ಶಾಲೆ, ಕಾಲೇಜು ರಜೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಇಂದು (ಮಂಗಳವಾರ) ಕರೆ ನೀಡಿರುವ ಚಿತ್ರದುರ್ಗ ನಗರ ಬಂದ್‌ಗೆ ಬೆಂಬಲ ವ್ಯಕ್ತವಾಗಿದ್ದು, ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಿದ್ದರಿಂದ ಕೆಲ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಗಾಂಧಿ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಯಲುಸೀಮೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿವೆ ಎಂದು ಆರೋಪಿಸಿದರು. ರಾಜ್ಯದ ಯಾವುದೇ ನೀರಾವರಿ ಯೋಜನೆ ಇಷ್ಟೊಂದು ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ ಎಂದು ದೂರಿದರು.

ಬಂದ್‌ಗೆ ಬಿಜೆಪಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೇರಿ 20ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬೆಂಬಲ‌ ವ್ಯಕ್ತಪಡಿಸಿದ್ದು, ಆಟೋ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ಬಸ್‌ಗಳು ನಗರದ ಹೊರ ಭಾಗದ ಹೆದ್ದಾರಿಯಲ್ಲಿ ಸಂಚರಿಸುತ್ತಿವೆ.

ಚಿತ್ರದುರ್ಗದ ಗಾಂಧಿ ವೃತ್ತ, ಮೆದೇಹಳ್ಳಿ ರಸ್ತೆ, ಸಂತೆಹೊಂಡದ ಬಳಿ ಬೆಳಗ್ಗೆ ಜಮಾಯಿಸಿದ ಪ್ರತಿಭಟನಕಾರರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಮನವಿ ಮಾಡಿದರು. ನಸುಕಿನಿಂದಲೇ ಆರಂಭವಾಗಿದ್ದ ತರಕಾರಿ, ಹೂ ಹಾಗೂ ಹಣ್ಣು ಮಾರುಕಟ್ಟೆ ಬಂದ್ ಮಾಡಿಸಲಾಯಿತು. ಖಾಸಗಿ ಬಸ್ ನಿಲ್ದಾಣಕ್ಕೆ ತೆರಳಿದ ಕೆಲವರು ಸಂಚಾರಕ್ಕೆ ಅಡ್ಡಿಪಡಿಸಿದರು. ಆಟೋ ಚಾಲಕರ ಮನವೊಲಿಸಿ ಬಂದ್‌ಗೆ ಬೆಂಬಲ ಕೋರಿದರು.

ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಕೆಲ ಖಾಸಗಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಯಿತು. ಸರ್ಕಾರಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿರುವುದು ಸಾಮಾನ್ಯವಾಗಿದೆ. ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಬಂದ್ ಬೆಂಬಲಿಸುವಂತೆ ಮನವಿ ಮಾಡಲಾಗುತ್ತಿದೆ. ಹೋಟೆಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಬಂದ್ ಆಗಿವೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ