NEWSರಾಜಕೀಯ

ಆಡಳಿತದಲ್ಲಿ ನಾಗರಿಕರ ಪಾತ್ರ ಹೆಚ್ಚಾಗಬೇಕು: ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಗಳ ಆಡಳಿತ ಹಾಗೂ ನಾಗರಿಕರ ನಡುವೆ ಅಂತರವಿದ್ದು, ಇವರೆಡರ ನಡುವೆ ಸೇತುವೆ ರಚನೆಯಾಗಿ ಒಂದುಗೂಡಿದಾಗ ಮಾತ್ರ ಜನಸಾಮಾನ್ಯರ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು ಅಪಾರ್ಟ್‌ಮೆಂಟ್ಸ್‌ ಫೆಡರೇಷನ್‌ ಆಯೋಜಿಸಿದ್ದ “ಆಲ್‌ ಪಾರ್ಟಿ ಟೌನ್‌ಹಾಲ್‌” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “15 ವರ್ಷಗಳ ಹಿಂದೆ ಸ್ಮಾರ್ಟ್‌ ವೋಟ್‌ ಎಂಬ ಸಂಘಟನೆ ಕಟ್ಟಿಕೊಂಡು ಇಂತಹದ್ದೇ ಚರ್ಚೆಗಳನ್ನು ನಡೆಸುತ್ತಿದ್ದೆವು. ಬೇರೆಬೇರೆ ವಿಷಯಗಳ ಆಧಾರದಲ್ಲಿ ವೋಟ್‌ ಬ್ಯಾಂಕ್‌ ಸೃಷ್ಟಿಯಾಗುತ್ತದೆ. ಆದರೆ ಜನರ ನಿಜವಾದ ಸಮಸ್ಯೆಗಳ ಬಗ್ಗೆ ಮಾತ್ರ ಚುನಾವಣೆಯಲ್ಲಿ ಚರ್ಚೆಯಾಗುತ್ತಿಲ್ಲ ಎಂಬ ಕಾರಣಕ್ಕೆ ಅಂತಹ ಪ್ರಯತ್ನ ಮಾಡಿದ್ದೆವು ಎಂದರು.

ಇನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳು ಕೇವಲ ಮತದಾರರು ಅಷ್ಟೇ ಅಲ್ಲ, ಅನೇಕ ಮತದಾರರ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಇರುವ ಪ್ರಭಾವಿಗಳು ಕೂಡ ಆಗಿದ್ದಾರೆ. ತಮ್ಮೊಂದಿಗೆ ಕೆಲಸ ಮಾಡುವವರು, ನೆರೆಹೊರೆಯವರು, ಅಪಾರ್ಟ್‌ಮೆಂಟ್‌ ಭದ್ರತಾ ಸಿಬ್ಬಂದಿ, ಕೆಲಸಗಾರರು, ಚಾಲಕರು ಸೇರಿದಂತೆ ಎಲ್ಲರ ಜೊತೆ ಚರ್ಚಿಸುವ ಅವಕಾಶವಿದೆ. ಅವರು ಇದನ್ನು ಸದುಪಯೋಗ ಪಡಿಸಿಕೊಂಡು ರಾಜಕೀಯವನ್ನು ಸ್ವಚ್ಛಗೊಳಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಸರ್ಕಾರದ ನೀತಿಗಳ ಬಗ್ಗೆ ಚರ್ಚೆಯಾಗುವುದಕ್ಕಿಂತ ಮುಖ್ಯವಾಗಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ. ಸರ್ಕಾರದ ಆಡಳಿತ ಹಾಗೂ ಜನರ ನಡುವೆ ಹೆಚ್ಚಿನ ಅಂತರವಿದ್ದು, ಇವೆರಡರ ನಡುವೆ ಸೇತುವೆ ನಿರ್ಮಿಸುವ ಕೆಲಸ ಆಗಬೇಕಿದೆ. ಆಗ ಮಾತ್ರ ಜನಸಾಮಾನ್ಯರ ನಿಜವಾದ ಸಮಸ್ಯೆಗಳಿಗೆ ಸರ್ಕಾರದ ಸ್ಪಂದನೆ ಸಾಧ್ಯವಾಗುತ್ತದೆ ಎಂದರು.

ರಸ್ತೆಯಲ್ಲಿ ರೇಬಿಸ್‌ ಕಾಯಿಲೆಯಿರುವ ನಾಯಿಯೊಂದು ಜನರಿಗೆ ಕಚ್ಚುತ್ತಿರುವುದು ಸರ್ಕಾರ ಕಚೇರಿಯಲ್ಲಿ ಕುಳಿತಿರುವವರಿಗೆ ತಿಳಿಯಬೇಕೆಂದರೆ, ಜನರೇ ಅಧಿಕಾರಿಗೆ ಮಾಹಿತಿ ನೀಡಬೇಕು. ದೆಹಲಿ ಸರ್ಕಾರದ ಅನೇಕ ಯೋಜನೆಗಳು ಜನರು ನೀಡಿದ ಸಲಹೆಗಳ ಆಧಾರದಲ್ಲಿ ರೂಪಿಸಲ್ಪಟ್ಟಿವೆ. ಆದ್ದರಿಂದಲೇ ಅವು ಯಶಸ್ವಿಯಾಗಿವೆ. ಕರ್ನಾಟಕದಲ್ಲಿ ಕೂಡ ಆಡಳಿತದಲ್ಲಿ ನಾಗರಿಕರ ಸಹಭಾಗಿತ್ವ ಹೆಚ್ಚಾಗಬೇಕು ಎಂದು ಪೃಥ್ವಿ ರೆಡ್ಡಿ ಅಭಿಪ್ರಾಯಪಟ್ಟರು.

ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ, ಕಾಂಗ್ರೆಸ್ ಶಾಸಕ ರಾಮಲಿಂಗ ರೆಡ್ಡಿ, ಜೆಡಿಎಸ್‌ ವಕ್ತಾರ ತನ್ವೀರ್‌ ಅಹಮದ್‌ ಸಂವಾದದಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ