ಬೆಂಗಳೂರು: ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಕಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಕಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಕಾಯಂ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಠ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಠ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.
ಇನ್ನು ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಕಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಕಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳ ವರೆಗೆ ಹೆಚ್ಚಳ ವಾಗಿಗಿದ್ದು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ತಿಳಿಸಿದರು.
ಇನ್ನು ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದರು.
1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ತಿಳಿಸಿದರು.
ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡಿದರು.
ಇನ್ನು ದೇಶವೊಂದರ ಅಭಿವೃದ್ಧಿಯ ವೇಗವನ್ನು ನಿರ್ಧರಿಸುವುದು ದುಡಿಯುವ ಕೈಗಳ ಕ್ಷಮತೆ ಮತ್ತು ದಕ್ಷತೆ. ಹಗಲಿರುಳೆನ್ನದೆ ರಾಷ್ಟ್ರನಿರ್ಮಾಣದಲ್ಲಿ ಅರ್ಪಿಸಿಕೊಂಡಿರುವ ಈ ಕಾರ್ಮಿಕರ ಘನತೆಯ ಬದುಕು ಮತ್ತು ಕೆಲಸಕ್ಕೆ ತಕ್ಕ ಕೂಲಿಯ ಕೂಗಿಗೆ ನಾವು ದನಿಗೂಡಿಸೋಣ ಎಂದರು.
ಬಿಬಿಎಂಪಿ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳ ವಿತರಿಸಲಾಯಿತು. ಕೇಂದ್ರ ಸರ್ಕಾರದ ವಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಂಸದ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಎಚ್.ಸಿ. ಮಹದೇವಪ್ಪ, ಕೃಷ್ಣಭೈರೇಗೌಡ, ರಾಮಲಿಂಗಾರೆಡ್ಡಿ, ರಹೀಂ ಖಾನ್, ಬಿ.ಎ. ಸುರೇಶ್, ಕೆ.ಎಚ್. ಮುನಿಯಪ್ಪ, ಶಾಸಕರಾದ ಶಿವಣ್ಣ, ಎಸ್.ಟಿ ಸೋಮಶೇಖರ್, ರಿಜ್ವಾನ್ ಹರ್ಷದ್, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ರವಿ, ಯು.ಬಿ ವೆಂಕಟೇಶ್, ಬಿಬಿಎಂಪಿ ಆಡಳಿತಗಾರರಾದ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...