CRIMENEWSನಮ್ಮರಾಜ್ಯ

ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ

ವಿಜಯಪಥ ಸಮಗ್ರ ಸುದ್ದಿ
  • ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದ್ದು, ಬಟ್ಟೆ ಬ್ಯಾಗ್‌  ಖರೀದಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌  ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎಫ್‌ಐಆರ್ ದಾಖಲು ಮಾಡಲು ಮನವಿ ಮಾಡಲಾಗಿತ್ತು. ಆದರೆ, ಪೂರ್ವಾನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು.

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ವಕೀಲ ರವಿಚಂದ್ರೇಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಆದೇಶ ನೀಡಿದೆ. ಭ್ರಷ್ಟಾಚಾರ ಆರೋಪ ಬಂದಾಗ ತನಿಖೆ ಅನಿವಾರ್ಯ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದು, 4 ವಾರದ ಒಳಗೆ ಪೂರ್ವಾನುಮತಿ ನೀಡಲು ಸೂಚನೆ ನೀಡಿದ್ದಾರೆ.

ಏನಿದು ಆರೋಪ?: ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ರೋಹಿಣಿ ಸಿಂಧೂರಿ, ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಮುಕ್ತ ವಾತಾವರಣ ನಿರ್ಮಿಸಬೇಕು ಮತ್ತು ಪ್ಲಾಸ್ಟಿಕ್ ಬಳಕೆಗೆ ಗುಡ್‌ಬೈ ಹೇಳಿ ಬಟ್ಟೆ ಬ್ಯಾಗ್‌ ಗಳನ್ನು ಬಳಸಬೇಕು ಎಂದು ಜಿಲ್ಲೆಯ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು.

ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ  ಬಟ್ಟೆ ಬ್ಯಾಗ್‌ಗೆ  13 ರೂ. ಇದ್ದರೆ ಅವುಗಳಿಗೆ ಪ್ರತಿ ಬ್ಯಾಗ್‌ಗೆ  52 ರೂ. ದರ ನೀಡಿ ಖರೀದಿಸಲಾಗಿದೆ. ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 7,65,15,816 ಕೋಟಿ ರೂ. ನಷ್ಟವಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಬಟ್ಟೆ ಬ್ಯಾಗ್‌ ಗಳ ಖರೀದಿಗೆ ಬಳಸಿ ಭ್ರಷ್ಟಾಚಾರ ಎಸಗಲಾಗಿದೆ.

ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ ದುಬಾರಿ ಬೆಲೆಗೆ ಬ್ಯಾಗ್ ಖರೀದಿಸಲಾಗಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ 2021ರ ಅಕ್ಟೋಬರ್ 13ರಂದು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕೆಂದು ಎನ್‌.ಆರ್.ರವಿಚಂದ್ರೇಗೌಡ ದೂರು ನೀಡಿದ್ದರು.

Megha
the authorMegha

Leave a Reply

error: Content is protected !!
Latest news
ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ NWKRTC ಹಾವೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಪ್ಲಾಟ್‌ಫಾರಂನಲ್ಲಿ ನಿಂತಿದ್ದವರಿಗೆ ಡಿಕ್ಕಿ- ಮಗು ಸಾವು ಗ್ಯಾಸ್‌ ಸಿಲಿಂಡರ್‌ಗೆ 195.50 ರೂ ಏರಿಕೆ: ಶಾಕ್‌ಕೊಟ್ಟ ಕೇಂದ್ರ ಸರ್ಕಾರ KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನ... ಡೀಸೆಲ್‌ ಟ್ಯಾಂಕರ್‌-ಕಾರಿನ ನಡುವೆ ಭೀಕರ ಅಪಘಾತ: ತಪ್ಪಿದ ಭಾರಿ ದುರಂತ KSRTC: ಸಿಬ್ಬಂದಿಗಳಿಗೆ 38 ತಿಂಗಳ ಹಿಂಬಾಕಿ, ವೇತನ ಹೆಚ್ಚಳ ಮಾಡೋಕೆ ಹಣವಿಲ್ಲವೆನ್ನೋ ಸಚಿವರಿಗೆ ಅನಾವಶ್ಯ ಖರ್ಚು ಮಾಡೋಕ... ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ... KSRTC: ನಾಳೆ ನೌಕರರ ಕೂಟದ ಸರ್ವ ಸದಸ್ಯರ, ಪದಾಧಿಕಾರಿಗಳು, ನಿವೃತ್ತರ ಸಭೆ KSRTC: ನೌಕರರಿಗೆ ವೇತನ ಬಡ್ತಿ ನೀಡಿದ ಆಯಾ ತಿಂಗಳಲ್ಲಿಯೇ HRMSನಲ್ಲಿ ಜಾರಿ ಮಾಡಿ, ಇಲ್ಲದಿದ್ದರೆ ಕ್ರಮ- ಸಿಪಿಎಂ ಎಚ್ಚರ...