NEWSಕೃಷಿಬೆಂಗಳೂರು

ಜೂ.8ರವರೆಗೂ ಮಲೆನಾಡಿನ ಜಿಲ್ಲೆಗಳ ಹೊರತುಪಡಿಸಿ ಮೋಡಕವಿದ ವಾತಾವರಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಜೂ.8ರವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಆರು ದಿನಗಳ ಕಾಲ ಕರವಾಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಜಿಲ್ಲೆಗಳಾದ ಕೊಡಗು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ಜೂ.5ರಂದು ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರುಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ