NEWSನಮ್ಮರಾಜ್ಯಸಂಸ್ಕೃತಿ

ಲಾಲ್‍ಬಾಗ್‌ನಲ್ಲಿ ಗಣರಾಜ್ಯೋತ್ಸವ ಫ್ಲವರ್ ಶೋಗೆ ವಿಧ್ಯುಕ್ತ ಚಾಲನೆ ನೀಡಿದ ಸಿಎಂ ಬೊಮ್ಮಾಯಿ – 10 ದಿನಗಳ ಕಾಲ ಪ್ರದರ್ಶನ

ವಿಜಯಪಥ ಸಮಗ್ರ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2023 ಉದ್ಘಾಟಿಸಿದರು.

ಬೆಂಗಳೂರು: ಪ್ರತಿವರ್ಷದ ಗಣರಾಜ್ಯೋತ್ಸವದ ವೇಳೆ ಲಾಲ್‍ಬಾಗ್‌ನ ಗಾಜಿನ ಮನೆಯಲ್ಲಿ ಅನಾವರಣಗೊಳ್ಳುವ ಫಲಪುಷ್ಪ ಪ್ರದರ್ಶನದಲ್ಲಿ ಹೂಗಳಿಂದ ಅರಳುವ ಚಿತ್ರಗಳು ಪ್ರವಾಸಿಗರ ಗಮನ ಸೆಳೆಯುತ್ತವೆ. ಅದೇ ರೀತಿ ಈ ವರ್ಷವೂ ಸಸ್ಯಕಾಶಿ ಲಾಲ್‍ಬಾಗ್‌ಗೆ ಆಗಮಿಸುವ ಎಲ್ಲರ ಮನಸ್ಸುಗಳು ಬೆಂಗಳೂರಿನಲ್ಲೆ ರೌಂಡ್‌ ಹಾಕುತ್ತಿರುತ್ತವೆ.

ಇದೇನಪ್ಪ ಇದು ಲಾಲ್‍ಬಾಗ್‌ಗೆ ಹೋಗಿ ಬೆಂಗಳೂರನ್ನು ರೌಂಡ್‌ ಹಾಕೋದು ಅಂದರೆ ಏನು ಎಂದು ಯೋಚನೆ ಮಾಡುವ ಮುನ್ನವೇ ಆ ಬಗ್ಗೆ ನಿಮಗೆ ತಿಳಿಸಿಬಿಡುತ್ತೇವೆ. ಅದೇ ರೀ ಈ ಬಾರಿ ಗಣರಾಜ್ಯೋತ್ಸವದ ಅಂಗವಾಗಿ ಲಾಲ್‍ಬಾಗ್‌ನ ಗಾಜಿನ  ಮನೆಯಲ್ಲಿ ಸಿದ್ಧವಾಗಿರುವ ಫ್ಲವರ್ ಶೋನಲ್ಲಿ ಬೆಂಗಳೂರಿನ ಚಿತ್ರಣವನ್ನು ಪ್ರವಾಸಿಗರಿಗೆ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ.

ಹೌದು! 213 ನೇ ಫಲಪುಷ್ಪ ಪ್ರದರ್ಶನ ವಿಧ್ಯುಕ್ತವಾಗಿ ಇಂದು ಲೋಕಾರ್ಪಣೆಗೊಂಡಿದ್ದು, ಇಂದಿನಿಂದ ಜನವರಿ 30ರವರೆಗೆ ಅಂದರೆ 10 ದಿನಗಳ ಕಾಲ ನಡೆಯಲಿದೆ. ಆ ಹತ್ತುದಿನಗಳು ಪ್ರವಾಸಿಗರನ್ನು ತನ್ನತ್ತ ಸೆಳೆಯಲಿದೆ. ಇನ್ನು ಫಲಪುಷ್ಪ ಪ್ರದರ್ಶನಕ್ಕೆ ಹೋಗಬೇಕು ಎಂದು ಕಾತುರದಿಂದ ಕಾಯುತ್ತಿದ್ದ ರಾಜಧಾಣಿಯ ಮಂದಿ ಸೇರಿ ದೇಶ ವಿದೇಶದಿಂದ ಆಗಮಿಸುವ ಪ್ರವಾಸಿಗರಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡುವ ಮೂಲಕ ಅಧಿಕೃತವಾಗಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಫಲಪುಷ್ಪ ಪ್ರದರ್ಶನಕ್ಕೆ ಇಂದು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ, ರಾಜ್ಯದ ಸಸ್ಯಸಂಪತ್ತಿನ ಪ್ರದರ್ಶನ ಇಲ್ಲಿ ಆಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು 10-15 ಲಕ್ಷ ಜನ ಬರೋ ನಿರೀಕ್ಷೆ ಇದೆ ಎಂದು ಹೇಳಿದರು.

ರಾಜ್ಯದ ತೋಟಗಾರಿಕೆಯಿಂದ ಹಸಿರು ಹೆಚ್ಚಾಗಿ, ಉತ್ಪಾದನೆ ಹೆಚ್ಚಾಗಬೇಕು ಎಂಬ ದೃಷ್ಟಿಯಿಂದ ರಾಜ್ಯದಲ್ಲಿ ಹಸಿರು ವಿಸ್ತರಣೆಗಾಗಿ 100 ಕೋಟಿ ರೂಪಾಯಿ ಕೊಟ್ಟಿದ್ದೇನೆ ಎಂದ ಅವರು, ಬೆಂಗಳೂರು ಗಾರ್ಡನ್ ಸಿಟಿ ಎಂದೇ ಹೆಸರಾಗಿದ್ದು, ಇನ್ನು ಹೆಚ್ಚು ಹೆಚ್ಚು ಗಾರ್ಡನ್ ಗಳನ್ನು ಬೆಂಗಳೂರಿನಲ್ಲಿ ಬೆಳೆಸುತ್ತೇವೆ. ಆ ಮೂಲಕ ಗಾರ್ಡನ್ ಸಿಟಿಯ ಗತವೈಭವ ಮತ್ತೆ ಮರುಕಳಿಸಲಿ ಎಂದು ಹೇಳಿದರು.

ಫಲಪುಷ್ಪ ಮೇಳಕ್ಕೆ ಲಾಲ್‍ಬಾಗ್ ಅದ್ದೂರಿಯಾಗಿ ಸಿದ್ಧಗೊಂಡಿದೆ. ಬೆಂಗಳೂರು ನಗರದ ಚಿತ್ರಣ ಈ ಬಾರಿಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಕಂಗೊಳಿಸಲಿದೆ. ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಥೀಮ್ ಬೆಂಗಳೂರು ನಗರದ ಇತಿಹಾಸವಾಗಿದ್ದು, ಲಾಲ್‍ಬಾಗ್‍ನಲ್ಲಿ ಸೃಷ್ಟಿಯಾಗಲಿದೆ. ಮೆಗಾ ಫ್ಲೋರಲ್ ಫ್ಲೋ ಪರಿಕಲ್ಪನೆ ಪುಷ್ಪ ಪಿರಾಮಿಡ್‌ಗಳು ಕಂಗೊಳಸಲಿವೆ. ವಿದೇಶದಿಂದಲೂ ವಿವಿಧ ಬಗೆಯ ಹೂಗಳನ್ನು ತರಸಿ ಅಲಂಕಾರ ಮಾಡಲಾಗಿದೆ.

ಉದ್ಘಾಟನೆ ಕಾರ್ಯಕ್ರಮದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ, ತೋಟಗಾರಿಕೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ