NEWSನಮ್ಮರಾಜ್ಯಶಿಕ್ಷಣ-

ರಾಜ್ಯದ ನೂತನ ವಿಶ್ವವಿದ್ಯಾಲಯಗಳ ವರ್ಚುಯಲ್ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಿಲ್ಲೆಗೊಂದು ವಿಶ್ವವಿದ್ಯಾಲಯ’ ಇರಬೇಕೆಂಬ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಹಾಸನ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಬೀದರ್, ಮಂಡ್ಯ ಮತ್ತು ರಾಯಚೂರು ಸಂಯೋಜಿತ ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುಯಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದರು.

ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆಯ 8 ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸುವ ಜತೆಯಲ್ಲೇ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು 75 ಕೋಟಿ ರೂಪಾಯಿ ವೆಚ್ಚದಲ್ಲಿ ‘ಕರ್ನಾಟಕ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಕೆಐಟಿ) ಆಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷಿ ಯೋಜನೆಗೂ ಚಾಲನೆ ನೀಡಲಾಯಿತು. ಅಲ್ಲದೆ, ಧಾರವಾಡದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿಯ ಕಟ್ಟಡವನ್ನು ಕೂಡ ಲೋಕಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರದ ಕಳೆದ ಎರಡು ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಅಪಾರ ಮಹತ್ವ ಕೊಡಲಾಗಿದೆ. ನಮ್ಮ ಶಿಕ್ಷಣ ಮಾದರಿಯು ದೇಶಕ್ಕೆ ಮಾದರಿಯಾಗಿದೆ ಎಂದರು.

ವಿಶ್ವವಿದ್ಯಾಲಯ ಎಂದರೆ ನೂರಾರು ಎಕರೆ ಜಾಗದಲ್ಲಿ ಇರುವ ಕಲ್ಲಿನ‌ ಕಟ್ಟಡವಲ್ಲ. ರಾಜ್ಯದ ಯುವಜನರಿಗೆ ಅತ್ಯುತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ಸಿಗಬೇಕೆಂಬ ಗುರಿಯೊಂದಿಗೆ ಕೆಐಟಿ ಆರಂಭಿಸಲಾಗಿದೆ. ಇವು ಐದು ವರ್ಷಗಳಲ್ಲಿ ಐಐಟಿ ಮಟ್ಟಕ್ಕೆ ಹೋಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣದ ಬಲವರ್ಧನೆಗೆ ಸಹಭಾಗಿತ್ವ ಅತ್ಯಗತ್ಯವಾಗಿದೆ. ಹೀಗಾಗಿ ಕೆಐಟಿಗಳು ಜಾಗತಿಕ ಮಟ್ಟದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದರು.

ಒಂದು ಕಾಲದಲ್ಲಿ ಭೂಮಿಯ ಒಡೆತನ ಮತ್ತು ಹಣ ಯಜಮಾನಿಕೆಯ ಶಕ್ತಿಗಳಾಗಿದ್ದವು. ಆದರೆ ಈಗ ಜ್ಞಾನವು ಆ ಸ್ಥಾನದಲ್ಲಿದೆ. ವಿಶ್ವವಿದ್ಯಾಲಯಗಳು ಮುಂದಿನ ಜನಾಂಗಗಳನ್ನು ಸೃಷ್ಟಿಸುವ ತಾಣಗಳಾಗಿವೆ ಎಂದು ಪ್ರತಿಪಾದಿಸಿದರು.

ಮುಂದಿನ 25 ವರ್ಷಗಳು ದೇಶಕ್ಕೆ ಅಮೃತ ಕಾಲವಾಗಿವೆ. ಪಾಕಿಸ್ತಾನ, ಚೀನಾ ಸೇರಿ ಇಡೀ ಜಗತ್ತು ಭಾರತದತ್ತ ಬೆರಗಿನಿಂದ ನೋಡುತ್ತಿದೆ. ವಿದ್ಯಾರ್ಥಿಗಳು ಜ್ಞಾನವನ್ನು ಗಳಿಸಿಕೊಂಡು ಪರಮಹಂಸತ್ವವನ್ನು ಗಳಿಸಿ ಕೊಳ್ಳಬೇಕು ಎಂದು ಆಶಿಸಿದರು.

ಕಲಿಕೆ, ಕೌಶಲ್ಯ ಎರಡಕ್ಕೂ ಒತ್ತು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್‌ ನಾರಾಯಣ್ ಮಾತನಾಡಿ, ಉನ್ನತ ಶಿಕ್ಷಣದಲ್ಲಿ ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಒತ್ತು ಕೊಡಲಾಗಿದೆ. ರಾಜ್ಯದಲ್ಲಿ ಅಳವಡಿಸಿ ಕೊಂಡಿರುವ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶದಂತಹ ಪರಿಣಾಮಕಾರಿ ವ್ಯವಸ್ಥೆಯು ಇಡೀ ಪ್ರಪಂಚದಲ್ಲೇ ಎಲ್ಲೂ ಇಲ್ಲ. ಇದರಿಂದ ನಮ್ಮಲ್ಲಿ ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಎರಡೂ ಬಂದಿದೆ ಎಂದು ಹೇಳಿದರು.

ಸರ್ಕಾರವು ಕಳೆದ ನಾಲ್ಕು ವರ್ಷಗಳಲ್ಲಿ 25 ವಿ.ವಿ.ಗಳನ್ನು ಸ್ಥಾಪಿಸಿದೆ. ಜತೆಗೆ ಡಿಜಿಟಲೀಕರಣದ ಮೂಲಕ ಆಮೂಲಾಗ್ರ ಬದಲಾವಣೆ ಮಾಡಲಾಗುತ್ತಿದೆ. ಇದರ ಫಲವಾಗಿ 310 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಇದೇ ಮೊದಲ ಬಾರಿಗೆ ನ್ಯಾಕ್ ಮಾನ್ಯತೆ ಪಡೆದುಕೊಂಡಿವೆ ಎಂದು ತಿಳಿಸಿದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ವೈ.ಎಸ್.ಸಿದ್ದೇಗೌಡ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮುಂತಾದವರು ಉಪಸ್ಥಿತರಿದ್ದರು. ಎಲ್ಲ ಕುಲಪತಿಗಳು ತಮ್ಮ ಜಾಗದಿಂದಲೇ ವರ್ಚುವಲ್ ಮೂಲಕ‌ ಭಾಗಿಯಾಗಿದ್ದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್