ಕಾಂಗ್ರೆಸ್ ರೆಬಲ್ ನಾಯಕ ಹರಿಪ್ರಸಾದ್ ಮನೆಯಲ್ಲಿ ಉಪಾಹಾರ ಸೇವಿಸಿ 2 ದಶಕಗಳ ಮುನಿಸು ಮುರಿದುಕೊಂಡ ಸಿಎಂ!

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜತೆ ಉಪಾಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಎಚ್ಚರಿಕೆ ನೀಡಿದರು.
ಇದು ಪವರ್ ಶೇರಿಂಗ್ ವದಂತಿ ಮಧ್ಯೆ ಅಚ್ಚರಿಯ ಭೇಟಿ: ಅಧಿಕಾರ ಹಂಚಿಕೆ ವದಂತಿ ನಡುವೆ ಸಿದ್ದರಾಮಯ್ಯ ಅವರು ಎರಡು ದಶಕಗಳ ಮುನಿಸು ಮರೆತು ಕಾಂಗ್ರೆಸ್ ರೆಬಲ್ ನಾಯಕ ಹರಿಪ್ರಸಾದ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಅವರು, ಜೆಡಿಎಸ್ನಿಂದ ಕಾಂಗ್ರೆಸ್ ಸೇರ್ಪಡೆಯಾದ ಸಂದರ್ಭದಲ್ಲಿ ಹರಿಪ್ರಸಾದ್ ಬೆಂಬಲ ಸಿಕ್ಕಿರಲಿಲ್ಲ ಎಂಬ ಕೋಪ ಮುನಿಸಿನಿಂದ 2 ದಶಕಗಳ ಕಾಲ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದರು.
ಆದರೆ, ಕಾಂಗ್ರೆಸ್ಗೆ ಬಹುಮತ ಸಿಕ್ಕಿದ್ದರೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ್ದಕ್ಕೆ ಸಿಎಂಗೆ ಸಡ್ಡು ಹೊಡೆದು ಹರಿಪ್ರಸಾದ್ ಪ್ರತ್ಯೇಕ ಅಹಿಂದ ಸಮಾವೇಶವನ್ನೂ ನಡೆಸಿದ್ದರು. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಸಿಎಂ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದರು. ಬಹಿರಂಗ ಹೇಳಿಕೆ ಜಾಸ್ತಿ ಆಗುತ್ತಿದ್ದಂತೆ ಹೈಕಮಾಂಡ್ ಪ್ರತ್ಯೇಕ ಸಿಎಂ ಹೇಳಿಕೆ, ಪವರ್ ಶೇರಿಂಗ್ ಟಾಕ್ ಬಗ್ಗೆ ಮಾತನಾಡದಂತೆ ಸೂಚನೆಯನ್ನೂ ನೀಡಿತ್ತು.
ಈ ಎಲ್ಲ ಬೆಳವಣಿಗೆಗಳ ನಡುವೆ ಒಮ್ಮೆ ಸಿಎಂ ಅವರನ್ನು ಹರಿಪ್ರಸಾದ್ ಭೇಟಿ ಮಾಡಿದ್ದರು. ಈಗ ಇಂದು ಖುದ್ದಾಗಿ ಹರಿಪ್ರಸಾದ್ ನಿವಾಸಕ್ಕೆ ಉಪಾಹಾರಕ್ಕೆ ಆಗಮಿಸಿ 2 ದಶಕದ ಮುನಿಸಿಗೆ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಪಕ್ಷದೊಳಗಿನ ತಮ್ಮ ವಿರುದ್ಧ ಅಸಮಾಧಾನ ಹೊಂದಿರುವ ನಾಯಕನನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ ಎಂಬ ಪ್ರಶ್ನೆಯೂ ಎದ್ದಿದೆ.
ಅಲ್ಲದೆ ಹೈಕಮಾಂಡ್ ಮಟ್ಟದಲ್ಲಿ ಬಿ.ಕೆ.ಹರಿಪ್ರಸಾದ್ ತಮ್ಮದೇ ಹಿಡಿತವನ್ನು ಹೊಂದಿದ್ದಾರೆ. ಈಗ ದಿಢೀರ್ ಆಗಿ ಅವರನ್ನು ಸಿಎಂ ಭೇಟಿಯಾಗಿದ್ದು ಹಲವು ರಾಜಕೀಯ ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಎರಡೂವರೆ ವರ್ಷದ ಪವರ್ ಶೇರಿಂಗ್ ಟಾಕ್ ನಡುವೆಯೇ ಅಸಮಧಾನಿತರನ್ನ ಒಗ್ಗೂಡಿಸಿ ಮಾಸ್ಟರ್ ಸ್ಟ್ರೋಕ್ ಕೊಡಲು ಸಿಎಂ ಮುಂದಾಗುತ್ತಿದ್ದಾರಾ ಎಂಬ ಚರ್ಚೆಯೂ ಆರಂಭವಾಗಿರುವುದಂತು ಸುಳ್ಳು ಎಂದು ಹೇಳಲಾಗದು.

Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...