NEWSನಮ್ಮರಾಜ್ಯಬೆಂಗಳೂರುರಾಜಕೀಯ

ಕಾಂಗ್ರೆಸ್ ರೆಬಲ್ ನಾಯಕ ಹರಿಪ್ರಸಾದ್‌ ಮನೆಯಲ್ಲಿ ಉಪಾಹಾರ ಸೇವಿಸಿ 2 ದಶಕಗಳ ಮುನಿಸು ಮುರಿದುಕೊಂಡ ಸಿಎಂ!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ‌ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜತೆ ಉಪಾಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಎಚ್ಚರಿಕೆ ನೀಡಿದರು.

ಇದು ಪವರ್‌ ಶೇರಿಂಗ್‌ ವದಂತಿ ಮಧ್ಯೆ ಅಚ್ಚರಿಯ ಭೇಟಿ: ಅಧಿಕಾರ ಹಂಚಿಕೆ ವದಂತಿ ನಡುವೆ ಸಿದ್ದರಾಮಯ್ಯ ಅವರು ಎರಡು ದಶಕಗಳ ಮುನಿಸು ಮರೆತು ಕಾಂಗ್ರೆಸ್ ರೆಬಲ್ ನಾಯಕ ಹರಿಪ್ರಸಾದ್‌ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಅವರು, ಜೆಡಿಎಸ್‌ನಿಂದ ಕಾಂಗ್ರೆಸ್ ಸೇರ್ಪಡೆಯಾದ ಸಂದರ್ಭದಲ್ಲಿ ಹರಿಪ್ರಸಾದ್ ಬೆಂಬಲ ಸಿಕ್ಕಿರಲಿಲ್ಲ ಎಂಬ ಕೋಪ ಮುನಿಸಿನಿಂದ 2 ದಶಕಗಳ ಕಾಲ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದರು.

ಆದರೆ, ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದ್ದರೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ್ದಕ್ಕೆ ಸಿಎಂಗೆ ಸಡ್ಡು ಹೊಡೆದು ಹರಿಪ್ರಸಾದ್‌ ಪ್ರತ್ಯೇಕ ಅಹಿಂದ ಸಮಾವೇಶವನ್ನೂ ನಡೆಸಿದ್ದರು. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಸಿಎಂ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದರು. ಬಹಿರಂಗ ಹೇಳಿಕೆ ಜಾಸ್ತಿ ಆಗುತ್ತಿದ್ದಂತೆ ಹೈಕಮಾಂಡ್‌ ಪ್ರತ್ಯೇಕ ಸಿಎಂ ಹೇಳಿಕೆ, ಪವರ್ ಶೇರಿಂಗ್ ಟಾಕ್ ಬಗ್ಗೆ ಮಾತನಾಡದಂತೆ ಸೂಚನೆಯನ್ನೂ ನೀಡಿತ್ತು.

ಈ ಎಲ್ಲ ಬೆಳವಣಿಗೆಗಳ ನಡುವೆ ಒಮ್ಮೆ ಸಿಎಂ ಅವರನ್ನು ಹರಿಪ್ರಸಾದ್ ಭೇಟಿ ಮಾಡಿದ್ದರು. ಈಗ ಇಂದು ಖುದ್ದಾಗಿ ಹರಿಪ್ರಸಾದ್ ನಿವಾಸಕ್ಕೆ ಉಪಾಹಾರಕ್ಕೆ ಆಗಮಿಸಿ 2 ದಶಕದ ಮುನಿಸಿಗೆ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಪಕ್ಷದೊಳಗಿನ ತಮ್ಮ ವಿರುದ್ಧ ಅಸಮಾಧಾನ ಹೊಂದಿರುವ ನಾಯಕನನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಅಲ್ಲದೆ ಹೈಕಮಾಂಡ್ ಮಟ್ಟದಲ್ಲಿ ಬಿ.ಕೆ.ಹರಿಪ್ರಸಾದ್ ತಮ್ಮದೇ ಹಿಡಿತವನ್ನು ಹೊಂದಿದ್ದಾರೆ. ಈಗ ದಿಢೀರ್‌ ಆಗಿ ಅವರನ್ನು ಸಿಎಂ ಭೇಟಿಯಾಗಿದ್ದು ಹಲವು ರಾಜಕೀಯ ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಎರಡೂವರೆ ವರ್ಷದ ಪವರ್ ಶೇರಿಂಗ್ ಟಾಕ್ ನಡುವೆಯೇ ಅಸಮಧಾನಿತರನ್ನ ಒಗ್ಗೂಡಿಸಿ ಮಾಸ್ಟರ್ ಸ್ಟ್ರೋಕ್ ಕೊಡಲು ಸಿಎಂ ಮುಂದಾಗುತ್ತಿದ್ದಾರಾ ಎಂಬ ಚರ್ಚೆಯೂ ಆರಂಭವಾಗಿರುವುದಂತು ಸುಳ್ಳು ಎಂದು ಹೇಳಲಾಗದು.

Deva
the authorDeva

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ