ನ.26ರಂದು ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಪದಾಧಿಕಾರಿಗಳ ಸಭೆ ಕರೆದ ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಇದೇ ನವೆಂಬರ್ 26ರಂದು ಸಿಎಂ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಸಭೆ ಕರೆಯಲಾಗಿದೆ ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷ ತಿಳಿಸಿದ್ದಾರೆ.

ಇಂದು ಸಭೆ ನಡೆಯುವ ಸಂಬಂಧ ಎಂಡಿ ಮಾಹಿತಿ ನೀಡಿದ್ದು, ಸಭೆ ನಡೆಯುವ ಸ್ಥಳವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಈ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸುವ ಸಭೆಗೆ ಎಲ್ಲ ಸಂಘಟನೆಗಳ ತಲಾ ಇಬ್ಬರು ಪದಾಧಿಕಾರಿಗಳು ಹಾಜರಾಗಬೇಕು ಎಂದು ತಿಳಿಸಿದ್ದಾರೆ.
ಈ ಸಭೆ ಅಂದು ಸಂಜೆ 4 ಗಂಟೆಗೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೂ ಹಾಗೂ ಮಧ್ಯಾಹ್ನ 4.30ಕ್ಕೆ ನೌಕರರ ಒಕ್ಕೂಟದೊಂದಿಗೆ ಸಭೆಯನ್ನು ಮುಖ್ಯಮಂತ್ರಿಗಳ ನಿರ್ದೇಶನದಂತೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 4ರಂದು ಹೈ ವೋಲ್ಟೆಜ್ ಸಭೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಇದೇ ರೀತಿ ಬೇಡಿಕೆಗಳ ಕುರಿತು ಜುಲೈ 4ರಂದು ಸಂಜೆ ಹೈ ವೋಲ್ಟೆಜ್ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದಿತ್ತು. ಆದರೆ, ಸಿಎಂ ಸಂಘಟನನೆಗಳೊಂದಿಗೆ ಸರಿಯಾಗಿ ಚರ್ಚಿಸದ ಕಾರಣ ಅರ್ಧಕ್ಕೆ ಸಭೆ ಮೊಟಕುಗೊಂಡಿತ್ತು. ಆ ಬಳಿಕ ವಾರದೊಳಗೆ ಸಭೆ ಕರೆಯುವುದಾಗಿ ತಿಳಿಸಿ ಮತ್ತೆ ಕರೆಯಲೇ ಇಲ್ಲ. ಇದರಿಂದ ರೊಚ್ಚಿಗೆದ್ದ ಜಂಟಿ ಕ್ರಿಯಾ ಸಮಿತಿ ಆ.5ರಿಂದ ಮುಷ್ಕರಕ್ಕೆ ಕರೆ ನೀಡಿತ್ತು ಆಗಲು ಸಭೆ ಕರೆದು ಮತ್ತೆ ಗೊಂದಲದಲ್ಲಿ ಅಂತ್ಯವಾಗಿತ್ತು.
ಇನ್ನು ನ.26 ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ನೌಕರರ ವೇತನಕ್ಕೆ ಸಂಬಂಧಪಟ್ಟಂತೆ ಅಂತಿಮಾ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಇನ್ನು ಪ್ರತಿ 4 ವರ್ಷಕ್ಕೊಮ್ಮೆ ಮಾಡುತ್ತಿರುವ ಅಗ್ರಿಮೆಂಟ್ ಬಗ್ಗೆ ಒತ್ತಾಯ ಮಾಡುವುದನ್ನು ಬಿಟ್ಟು ಚುನಾವಣೆ ಸಂದರ್ಭದಲ್ಲಿ ತಾವೇ ನೌಕರರಿಗೆ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿ ಮಾಡಿ ಎಂಬ ಬೇಡಿಕೆಗಳನ್ನು ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಸಿಎಂ ಮುಂದಿಡಲಿದ್ದಾರೆ.
ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿಮಾಡಲು ಒಪ್ಪಿಗೆ ಸೂಚಿಸುವುದು ಕೂಡ ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸಾರಿಗೆ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಪದಾಧಿಕಾರಿಗಳು ಕೂಡ ಇದನ್ನೇ ಮಾಡಬೇಕು ಎಂದು ಸಿಎಂ ಅವರನ್ನು ಈಗಾಗಲೇ ಒತ್ತಾಯಿಸಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಕೂಡ ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿಪಕ್ಷ ನಾಯಕರಾಗಿದ್ದ ವೇಳೆ ನೋಡಿದ್ದು ಈ ಜಂಜಾಟವನ್ನು ದೂರ ಮಾಡಲು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಮಾಡೋಣ ಎಂದು ಸಾರಿಗೆ ಸಚಿವರು ಹಾಗೂ ಪ್ರಣಾಳಿಕೆ ಸಮಿತಿ ಪದಾಧಿಕಾರಿಗಳ ಬಳಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಬೇಡಿಕೆಗಳೇನು?: ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳ ಆಗಬೇಕಿರುವ ಬಗ್ಗೆ ಚರ್ಚಿಸಲು ಈ ಹೈ ವೋಲ್ಟೆಜ್ ಸಭೆ ಕರೆಯಲಾಗಿದೆ.
ಈ ಸಂಬಂಧ ಈ ಹಿಂದೆಯೇ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟವೂ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆ ಈಡೇರಿಕೆ ಬಗ್ಗೆ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳು ಸೇರಿದಂತೆ ಪ್ರಮುಖರಿಗೆ ಮನವಿ ಸಲ್ಲಿಸಿದ್ದರು.
ಅದರಂತೆ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಕುರಿತು ಚರ್ಚಿಸಲು ಏ.15ರ ಮುಖ್ಯಮಂತ್ರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದರು. ಆ ಬಳಿಕ ಜುಲೈ 4ರಂದು ಸಭೆ ಕರೆದು ಆ ನಂತರ ವಾರದೊಳಗೆ ಮತ್ತೆ ಸಭೆಕರೆಯುವುದಾಗಿ ತಿಳಿಸಿ ಈವರೆಗೂ ಸಿಎಂ ಸಭೆಯನ್ನೇ ಕರೆದಿರಲಿಲ್ಲ. ಹೀಗಾಗಿ ನೌಕರರು ತೀವ್ರ ಅಸಮಾಧಾನಗೊಂಡಿದ್ದಾರೆ.
ಕಳೆದ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಇನ್ನು ನೌಕರರಿಗೆ ಸಿಕ್ಕಿಲ್ಲ. ಜತೆಗೆ ಈಗಾಗಲೇ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳದ ಅವಧಿ ಮುಗಿದು 18 ತಿಂಗಳು ಕಳೆದರೂ ಆ ಬಗ್ಗೆಯೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಸರ್ಕಾರ ಆ.4ರಂದು ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟಗಳ ಸಭೆ ಕರೆದಿದ್ದು ಬಹುತೇಕ ಅಂತಿಮ ನಿರ್ಧಾರಕ್ಕೆ ಸರ್ಕಾರ ಬರಲಿದೆ. ಒಂದು ವೇಳೆ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಷ್ಕರ ಮಾಡುವುದಕ್ಕೆ ಈಗಾಗಲೇ ಸಂಘಟನೆಗಳ ಗೇಟ್ ಮೀಟಿಂಗ್‌ಗಳನ್ನು ಮಾಡಿಕೊಂಡು ಸಿದ್ಧವಾಗಿವೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಆ.4ರಂದು ಕಾರ್ಮಿಕ ಸಂಘಟನೆಗಳ ಸಭೆ ಕರೆದಿದ್ದು ಖುದ್ದು ಮುಖ್ಯಮಂತ್ರಿಗಳೇ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಇನ್ನು ಸಭೆಯಲ್ಲಿ ಸರ್ಕಾರ ಚುನಾವಣಾ ಪೂರ್ವದಲ್ಲಿ ನೌಕರರಿಗೆ ಕೊಟ್ಟಿರುವ ಸರಿ ಸಮಾನ ವೇತನ ಕೊಡಲು ಒಪ್ಪುತ್ತದೋ ಇಲ್ಲ 4ವರ್ಷಗಳಿಗೊಮ್ಮೆ ನಡೆಯುತ್ತಿರುವ ವೇತನ ಪರಿಷ್ಕರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಿದೆ.

Related









