ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಡಿಸಿಎಂರ ತರಾಟೆಗೆ ತೆಗೆದುಕೊಂಡ: ಸಾಯಿ ಲೇಔಟ್ ನಿವಾಸಿಗಳು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳೆ ಹಾನಿ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಾಯಿ ಲೇಔಟ್ ನಿವಾಸಿಗಳು ಸಿಎಂ, ಡಿಸಿಎಂರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಸಾಯಿ ಲೇಔಟ್ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಅವರನ್ನು ರಸ್ತೆ ಮಧ್ಯೆಯೇ ತಡೆದು ಪ್ರಶ್ನಿಸಿದರು. ಬನ್ನಿ ಮಳೆಯಿಂದ ತೊಂದರೆಯಾದ ಮನೆಗಳಿಗೆ ಭೇಟಿ ನೀಡಿ. ದೂರದಿಂದ ನೋಡಿದ್ರೆ ಏನು ಗೊತ್ತಾಗುತ್ತೆ ಎಂದು ಸ್ಥಳೀಯ ಮಹಿಳೆಯರು ಒತ್ತಾಯಿಸಿದರು.
ಬಿಬಿಎಂಪಿ ಅಧಿಕಾರಿಗಳು ಸಾರ್ವಜನಿಕರನ್ನು ಸಮಾಧಾನ ಪಡಸಲು ಯತ್ನಿಸಿದರು. ಇವರು ಕಷ್ಟ ಸುಖ ಕೇಳಲು ಬಂದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಗೊಂದಲದ ವಾತಾವರಣ ಹಿನ್ನಲೆ, ಸಾರ್ವಜನಿಕ ಮನವಿಯನ್ನು ಸರಿಯಾಗಿ ಆಲಿಸದೆ ತೆರಳಿದ ಸಿಎಂ, ಡಿಸಿಎಂ ವಿರುದ್ಧ ಸ್ಥಳೀಯರ ಆಕ್ರೋಶ ಹೆಚ್ಚಾಯಿತು.
ಈ ನಡುವೆ ಸಿಎಂ ಸಮಸ್ಯೆ ಬಗ್ಗೆ ವಿವರಣೆ ಪಡೆದು ಸಮಾಧಾನ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿ, ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಬಳಿಕ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇನ್ನು ಮಾನ್ಯತಾ ಟೆಕ್ ಪಾರ್ಕ್ ಬಳಿಯ ವೀರಣ್ಣನ ಪಾಳ್ಯಗೆ ಭೇಟಿ ನೀಡಿದ ಸಿಎಂ, ರಾಜಕಾಲುವೆ ಒತ್ತುವರಿ ತೆರವಿಗೆ ಖಡಕ್ ಸೂಚನೆ ನೀಡಿದರು. ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಸಿಎಂ, ಡಿಸಿಎಂ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡಿ ಎಂದು ಸೂಚಿಸಿದರು.
ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
ಎಚ್ಬಿಆರ್ ಲೇಔಟ್ ಭೇಟಿ: ಬಳಿಕ ಸಿಎಂ ಸಿದ್ದರಾಮಯ್ಯ HBR ಲೇಔಟ್ 5ನೇ ಬ್ಲಾಕ್ಗೆ ಭೇಟಿ ನೀಡಿ ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿದರು. ಸಚಿವ ಕೆ.ಜೆ.ಜಾರ್ಜ್ ಸಮಸ್ಯೆ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಮಾಹಿತಿ ನೀಡಿದರು.
ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಬಾಧಿತ ಪ್ರದೇಶಗಳಲ್ಲಿ ಬೇಸ್ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ನಗರ ಯೋಜನೆಯಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚಿಸಿದರು.
ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ಪರಿಶೀಲನೆ: ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಡ್ಡರಪಾಳ್ಯ ಬಡಾವಣೆಗೆ ಭೇಟಿ ನೀಡಿ ರಾಜಕಾಲುವೆ ವೀಕ್ಷಣೆ ಮಾಡಿದರು. ರಾಜಕಾಲುವೆ ವಿಸ್ತೀರ್ಣ 29 ಮೀಟರ್ ಆಗಿದ್ದು, ಬೆಂಗಳೂರಿನ ಅತಿ ದೊಡ್ಡ ರಾಜಕಾಲುವೆಯಾಗಿದೆ.
ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು, ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀ+ರು ಈ ಬಾಟಲ್ ನೆಕ್ನಲ್ಲಿ ತುಂಬಿ ಹರಿದು ಸಾಯಿ ಲೇಔಟ್ಗೆ ನುಗ್ಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.
ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ನಿನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ ಬಿಡಿಎಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.
Related

You Might Also Like
ಭಾರಿ ಮಳೆಗೆ ಬಿಬಿಎಂಪಿಯ 63 ಕೆರೆಗಳು ಭರ್ತಿ: ಆಯುಕ್ತೆ ಪ್ರೀತಿ ಗೆಹ್ಲೋಟ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ...
ಜೂ.9 ರಿಂದ 20 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3: ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-3ರನ್ನು ಜೂನ್ 9 ರಿಂದ 20 ರವರೆಗೆ ನಡೆಸಲು...
ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸ ಗೊಬ್ಬರ ಬಳಸಿ: ರೈತರಿಗೆ ಕೃಷಿ ಇಲಾಖೆ ಸಲಹೆ
ಬೆಂಗಳೂರು: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ...
ಸುಗಮ್ಯ ಭಾರತ ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಸವರಾಜು ಚಾಲನೆ
ಬೆಂಗಳೂರು ಗ್ರಾಮಾಂತರ: ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ...
KKRTC ಕಂಡಕ್ಟರ್ ಮಗ ಐಎಫ್ಎಸ್ ಪರೀಕ್ಷೆಯಲ್ಲಿ ದೇಶಕ್ಕೆ 41ನೇ ರ್ಯಾಂಕ್
ಲಿಂಗಸುಗೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರ ಮಗ ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಪರೀಕ್ಷೆಯಲ್ಲಿ ದೇಶಕ್ಕೆ 41ನೇ ರ್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ....
KSRTC ಬಸ್- ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ: ವ್ಯಾನ್ ಚಾಲಕ ಸ್ಥಳದಲ್ಲೇ ಸಾವು
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಓಮ್ನಿವ್ಯಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿವ್ಯಾನ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದ ಅಮಾನಿ ಕೆರೆ ಬಳಿ...
ಟನ್ ಕಬ್ಬಿಗೆ ₹4500 ಬೆಲೆ ನಿಗದಿ ಪಡಿಸಲು ರಾಜ್ಯ ಕಬ್ಬು ಬೆಳೆಗಾರರ ಸಂಘ ಆಗ್ರಹ
ಬೆಂಗಳೂರು: ಕಬ್ಬಿನ ಎಫ್ಆರ್ಪಿ ದರ 2025-2026ನೇ ಸಾಲಿನಲ್ಲಿ ಟನ್ಗೆ ಕೇವಲ ₹150 ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದ್ದು ಪುನರ್ ಪರಿಶೀಲನೆ ಮಾಡಿಸಿ ಸಿಎಸಿಪಿ ವರದಿಯಂತೆ ಟನ್ ಕಬ್ಬಿಗೆ ₹4500...
ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕನ್ನಡಿ ಡಾ. ಎಂ.ಎ.ಸಲೀಂ ಅಧಿಕಾರ ಸ್ವೀಕಾರ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಇಂದು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ, ಅವರಿಂದ ತೆರವಾದ ಡಿಜಿ-ಐಜಿಪಿ ಸ್ಥಾನಕ್ಕೆ ಸಿಐಡಿ ಡಿಜಿ ಡಾ. ಎಂ.ಎ.ಸಲೀಂ...
ಇನ್ನು ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ ನಿರ್ಮಾಣಕ್ಕೆ ಅವಕಾಶವಿಲ್ಲ: ಸಿಎಂ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ ನಿರ್ಮಾಣ ಮಾಡಲು ಅವಕಾಶ ನೀಡದಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...