NEWSಬೆಂಗಳೂರು

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಡಿಸಿಎಂರ ತರಾಟೆಗೆ ತೆಗೆದುಕೊಂಡ: ಸಾಯಿ ಲೇಔಟ್ ನಿವಾಸಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳೆ ಹಾನಿ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ಈ ವೇಳೆ ಸಾಯಿ ಲೇಔಟ್ ನಿವಾಸಿಗಳು ಸಿಎಂ, ಡಿಸಿಎಂರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಸಾಯಿ ಲೇಔಟ್​​ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಅವರನ್ನು ರಸ್ತೆ ಮಧ್ಯೆಯೇ ತಡೆದು ಪ್ರಶ್ನಿಸಿದರು.‌ ಬನ್ನಿ ಮಳೆಯಿಂದ ತೊಂದರೆಯಾದ ಮನೆಗಳಿಗೆ ಭೇಟಿ ನೀಡಿ. ದೂರದಿಂದ ನೋಡಿದ್ರೆ ಏನು ಗೊತ್ತಾಗುತ್ತೆ ಎಂದು ಸ್ಥಳೀಯ ಮಹಿಳೆಯರು ಒತ್ತಾಯಿಸಿದರು.

ಬಿಬಿಎಂಪಿ ಅಧಿಕಾರಿಗಳು ಸಾರ್ವಜನಿಕರನ್ನು ಸಮಾಧಾನ ಪಡಸಲು ಯತ್ನಿಸಿದರು. ಇವರು ಕಷ್ಟ ಸುಖ ಕೇಳಲು ಬಂದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಗೊಂದಲದ ವಾತಾವರಣ ಹಿನ್ನಲೆ, ಸಾರ್ವಜನಿಕ ಮನವಿಯನ್ನು ಸರಿಯಾಗಿ ಆಲಿಸದೆ ತೆರಳಿದ ಸಿಎಂ, ಡಿಸಿಎಂ ವಿರುದ್ಧ ಸ್ಥಳೀಯರ ಆಕ್ರೋಶ ಹೆಚ್ಚಾಯಿತು.

ಈ ನಡುವೆ ಸಿಎಂ ಸಮಸ್ಯೆ ಬಗ್ಗೆ ವಿವರಣೆ ಪಡೆದು ಸಮಾಧಾನ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿ, ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇನ್ನು ಮಾನ್ಯತಾ ಟೆಕ್ ಪಾರ್ಕ್ ಬಳಿಯ ವೀರಣ್ಣನ ಪಾಳ್ಯಗೆ ಭೇಟಿ ನೀಡಿದ ಸಿಎಂ, ರಾಜಕಾಲುವೆ ಒತ್ತುವರಿ ತೆರವಿಗೆ ಖಡಕ್ ಸೂಚನೆ ನೀಡಿದರು.‌ ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಸಿಎಂ, ಡಿಸಿಎಂ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡಿ ಎಂದು ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್​ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

ಎಚ್​ಬಿಆರ್ ಲೇಔಟ್ ಭೇಟಿ: ಬಳಿಕ ಸಿಎಂ ಸಿದ್ದರಾಮಯ್ಯ HBR ಲೇಔಟ್ 5ನೇ ಬ್ಲಾಕ್​ಗೆ ಭೇಟಿ ನೀಡಿ ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿದರು. ಸಚಿವ ಕೆ.ಜೆ.ಜಾರ್ಜ್ ಸಮಸ್ಯೆ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಮಾಹಿತಿ ನೀಡಿದರು.

ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಬಾಧಿತ ಪ್ರದೇಶಗಳಲ್ಲಿ ಬೇಸ್​ಮೆಂಟ್​ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ನಗರ ಯೋಜನೆಯಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚಿಸಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ಪರಿಶೀಲನೆ: ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಡ್ಡರಪಾಳ್ಯ ಬಡಾವಣೆಗೆ ಭೇಟಿ ನೀಡಿ ರಾಜಕಾಲುವೆ ವೀಕ್ಷಣೆ ಮಾಡಿದರು. ರಾಜಕಾಲುವೆ ವಿಸ್ತೀರ್ಣ 29 ಮೀಟರ್ ಆಗಿದ್ದು, ಬೆಂಗಳೂರಿನ ಅತಿ ದೊಡ್ಡ ರಾಜಕಾಲುವೆಯಾಗಿದೆ.

ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು, ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀ+ರು ಈ ಬಾಟಲ್ ನೆಕ್​ನಲ್ಲಿ ತುಂಬಿ ಹರಿದು ಸಾಯಿ ಲೇಔಟ್​ಗೆ ನುಗ್ಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್​ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ನಿನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ ಬಿಡಿಎಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...