NEWSಕ್ರೀಡೆನಮ್ಮರಾಜ್ಯ

ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯದ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಗೆ ಸಿಎಂ ಅಭಿನಂದನೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರನ್ನು ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು.

ಇಂದಿನ ಅಧಿವೇಶನ ವೀಕ್ಷಣೆಗೆ ಬಂದಿದ್ದ ಧನಲಕ್ಷ್ಮೀ ಪೂಜಾರಿ ಮತ್ತು ಅವರ ತರಬೇತುದಾರರನ್ನು ವಿಶೇಷವಾಗಿ ಸ್ವಾಗತಿಸಿ, ಅವರ ಸಾಧನೆಯನ್ನು ಸಿಎಂ ಗೌರವಿಸಿದರು.

ಈಗಾಗಲೇ ರಾಜ್ಯ ಸರ್ಕಾರ ಧನಲಕ್ಷ್ಮೀ ಅವರಿಗೆ ಐದು ಲಕ್ಷ ನಗದು‌ ಪ್ರೋತ್ಸಾಹಧನ ನೀಡಿದೆ ಎಂದು ಇದೇ ವೇಳೆ ತಿಳಿಸಿದರು.

Megha
the authorMegha

Leave a Reply

error: Content is protected !!