NEWSನಮ್ಮರಾಜ್ಯರಾಜಕೀಯ

ಉನ್ನತ ಮಹಿಳಾಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಸಿಎಂ ಗರಂ : ಕ್ರಮ ಜರುಗಿಸಲು ಸಿಎಸ್‌ಗೆ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉನ್ನತ ಸ್ಥಾನದಲ್ಲಿರುವ ಮಹಿಳಾಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಗರಂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ಅವರಿಗೆ ನೋಟಿಸ್ ನೀಡಿ ಈ ಇಬ್ಬರು ಅಧಿಕಾರಿಗಳಿಂದ ವರದಿ ಪಡೆದು ಕ್ರಮ ತೆಗೆದುಕೊಳ್ಳಲು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಐಎಎಸ್ ಹಾಗೂ ಐಪಿಎಸ್ ಬೀದಿ ರಂಪಾಂಟದಿಂದ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ. ಅಧಿವೇಶನದ ಸಂದರ್ಭದಲ್ಲಿ ವಿಪಕ್ಷ ನಾಯಕರು ಇದನ್ನೇ ದೊಡ್ಡ ವಿಷಯವನ್ನಾಗಿ ಚರ್ಚೆ ನಡೆಸಬಹುದು. ಅಧಿಕಾರಿಗಳಾದವರು ಸಾರ್ವಜನಿಕರಿಗೆ ಮಾದರಿಯಾಗಬೇಕು.

ಈ ರೀತಿ ಬೀದಿ ರಂಪಾಟ ಮಾಡ್ತಿರೋದು ಸರಿಯಲ್ಲ. ಇವರಿಂದ ಎಲ್ಲ ಐಎಎಸ್, ಐಪಿಎಸ್ ಅಧಿಕಾರಿಗಳಿಗೂ ಅಪಮಾನ ಆದಂತೆ. ಹಾಗಾಗಿ ಇಬ್ಬರಿಗೂ ಸ್ಪಷ್ಟನೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ರೋಹಿಣಿ ಸಿಂಧೂರಿ ಮತ್ತು ರೂಪಾ ಕಿತ್ತಾಟಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಮಾನ್ಯ ಜನರು ಈ ರೀತಿ ಮಾತನಾಡಲ್ಲ. ಬಹಳ ಕೆಟ್ಟದಾಗಿ ವರ್ತನೆ ಮಾಡಿರೋದು ಗಮನಕ್ಕೆ ಬಂದಿದೆ. ಜನರು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ದೇವ ಮಾನವರು ಅಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲ ಅಧಿಕಾರಿಗಳಿಗೂ ಅಪಮಾನ ಆಗಿದೆ ಎಂದು ಬೇಸರ ಹೊರ ಹಾಕಿದರು.

ಈ ಸಂಬಂಧ ಈಗಾಗಲೇ ಡಿಜಿ ಹಾಗೂ ಸಿಎಸ್ ಜತೆಗೂ ಮಾತಾಡಿದ್ದೇನೆ. ಇದೆಲ್ಲವೂ ಅವರ ವೈಯಕ್ತಿಕ ವಿಚಾರಗಳಾಗಿದ್ದು, ಏನೇನೋ ಮಾತನಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರಿಂದ ನನಗೂ ತುಂಬಾ ನೋವು ಆಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮ ತಗೊಬೇಕೋ ಅದನ್ನು ಸಿಎಂ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಇನ್ನು ಅಧಿಕಾರಿಗಳ ಜಗಳ ಕುರಿತು ಪ್ರತಿಕ್ರಿಯೆ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಹಿಂದೇಟು ಹಾಕಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ