ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ ನೌಕರರಿಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಸಂಬಂಧ ಇದೇ ಜೂನ್ 13 ಅಥವಾ 14ರಂದು ಸಿಎಂ ನೌಕರರ ಸಂಘಟನೆಗಳ ಸಭೆ ಕರೆಯಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಿದ್ದು ಹೀಗಾಗಿ ಸಭೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳನ್ನು ಕರೆಯಲಾಗುವುದು ಎಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕೂಟದ ಪದಾಧಿಕಾರಿಗಳಿಗೆ ತಿಳಿಸಿದ್ದಾರೆ.
ಜೂನ್ 13 ಅಥವಾ 14ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ನೌಕರರ ವೇತನಕ್ಕೆ ಸಂಬಂಧಪಟ್ಟಂತೆ ಅಂತಿಮಾ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಇನ್ನು ಪ್ರತಿ 4 ವರ್ಷಕ್ಕೊಮ್ಮೆ ಮಾಡುತ್ತಿರುವ ಅಗ್ರಿಮೆಂಟ್ ಬಗ್ಗೆ ಒತ್ತಾಯ ಮಾಡುವುದನ್ನು ಬಿಟ್ಟು ಚುನಾವಣೆ ಸಂದರ್ಭದಲ್ಲಿ ತಾವೇ ನೌಕರರಿಗೆ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿ ಮಾಡಿ ಎಂಬ ಬೇಡಿಕೆಗಳನ್ನು ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಸಿಎಂ ಮುಂದಿಡಲಿದ್ದಾರೆ ಎನ್ನಲಾಗಿದೆ.
ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿಮಾಡಲು ಒಪ್ಪಿಗೆ ಸೂಚಿಸುವುದು ಕೂಡ ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸಾರಿಗೆ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಪದಾಧಿಕಾರಿಗಳು ಕೂಡ ಇದನ್ನೇ ಮಾಡಬೇಕು ಎಂದು ಸಿಎಂ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಕೂಡ ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿಪಕ್ಷ ನಾಯಕರಾಗಿದ್ದ ವೇಳೆ ನೋಡಿದ್ದು ಈ ಜಂಜಾಟವನ್ನು ದೂರ ಮಾಡಲು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಮಾಡೋಣ ಎಂದು ಸಾರಿಗೆ ಸಚಿವರು ಹಾಗೂ ಪ್ರಣಾಳಿಕೆ ಸಮಿತಿ ಪದಾಧಿಕಾರಿಗಳ ಬಳಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

Related









