Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಸರಳತೆ,ಆಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸಿದರು.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತ 9 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳು, ಸ್ಮರಣಿಕೆ ಹಾಗೂ ಗಾಂಧೀಜಿ ಅವರ ಜೀವ ಸಂದೇಶಗಳ ಕುರಿತು ಪುಸ್ತಕಗಳನ್ನು ವಿತರಿಸಿ ಶುಭಕೋರಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಜೀವನ-ಸಂದೇಶ ಹಾಗೂ ಅವರು ಸವೆಸಿದ ಹಾದಿ ಹಾಗೂ ಅವರು ಜೀವನದುದ್ದಕ್ಕೂ ಪಾಲಿಸಿಕೊಂಡು ಆದರ್ಶಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ಸಂಗತಿ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳಕರ್ ಮಾತನಾಡಿ, ಗಾಂಧೀಜಿಯವರ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ. ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು.

ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ. ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯತೀತ ನಿಲುವುಗಳು ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು ಎಂದರು.

ಜಿಲ್ಲಾಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಹಂತದಲ್ಲಿಯೇ ಬಹುಮಾನ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಬಂಧಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು ಎಂದರು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31,000, ದ್ವಿತೀಯ-21,000 ಹಾಗೂ ತೃತೀಯ-11,000 ರೂ.ಗಳ ನಗದು ಪುರಸ್ಕಾರ ನೀಡಲಾಯಿತು.

ವಿಜೇತರ ವಿವರ: ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ-ಅನಿರುದ್ಧ ಮನೋಜ್, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ,ಕೊಡಗು ಜಿಲ್ಲೆ, ದ್ವಿತೀಯ-ಹರ್ಷಿತ ಎನ್, ಸರ್ಕಾರಿ ಪ್ರೌಢಶಾಲೆ, ತುಂಗಣಿ, ಕನಕಪುರ ತಾ. ರಾಮನಗರ ಜಿಲ್ಲೆ, ತೃತೀಯ – ತೋಹಿದ್ ಅಹ್ಮದ್ ಲಾಡಜಿ, ಗೈಡ್ ಆಂಗ್ಲ ಮಾಧ್ಯಮ ಶಾಲೆ, ತಿಳವಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.

ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ-ಹೃತ್ಪೂರ್ವಕ್ ಕೆ.ಎಸ್. ಸಂತ ಮೈಕೇಲ್ ಕಾಲೇಜು, ಮಡಿಕೇರಿ ಕೊಡಗು ಜಿಲ್ಲೆ, ದ್ವಿತೀಯ-ಉದಯಕುಮಾರ್ ಎಂ.ಎಸ್. ಸರ್ಕಾರಿ ಪ.ಪೂ.ಕಾಲೇಜು ಮಂಡ್ಯ, ತೃತೀಯ-ಮೀನ ಎಂ, ಶ್ರೀಕೊಂಗಾಡಿಯಪ್ಪ ಪಿ.ಯು.ಕಾಲೇಜು, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ-ದರ್ಶಿನಿ ಡಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿವಮೊಗ್ಗ, ದ್ವಿತೀಯ-ಕಾವ್ಯಾ ಚಿಪ್ಪಲಕಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟ, ತೃತೀಯ-ಕುಸುಮಾಬಾಯಿ ಆರ್. ಜೆಎಸ್‍ಎಸ್ ಕಲಾ ಕಾಲೇಜು ಮೈಸೂರು ಇವರು ವಿಜೇತರಾಗಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ.ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್, ಇಲಾಖೆಯ ಜಂಟಿ ನಿರ್ದೇಶಕರುಗಳಾದ ಮಂಜುನಾಥ ಡೊಳ್ಳಿನ್, ಜಿ.ಬಿ.ಸಿದ್ದೇಶ್ವರಪ್ಪ, ಉಪನಿರ್ದೆಶಕ ಬಿ.ಕೆ. ರಾಮಲಿಂಗಪ್ಪ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ