NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್‌ಗೆ ಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸದ ನಿಗಮದ ಬಸ್‌ (ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್) ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ನಿಗಮದ ನೂತನ ಅಧ್ಯಕ್ಷ ಶ್ರೀನಿವಾಸ್‌ ಸಹ ಇದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯ ಸಾರಿಗೆ ಘಟಕಗಳಿಗೆ 5,800 ಬಸ್‌ಗಳು ಸೇರ್ಪಡೆಯಾಗಲಿವೆ ಮತ್ತು ಕೆಎಸ್‌ಆರ್‌ಟಿಸಿ ಅನೇಕ ಪ್ರಯಾಣಿಕರ ಸ್ನೇಹಿ ಯೋಜನೆಗಳನ್ನು ತಂದಿದೆ ಎಂದರು.

ಈ ಅಶ್ವಮೇಧ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದ್ದು, ಕೆಎಸ್ಆರ್​​ಟಿಸಿಗೆ ಒಟ್ಟು ಸಾವಿರ ಹೊಸ ಬಸ್​ಗಳು ಬರಲಿವೆ. ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್​​ಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ​ಈ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್‌ಗಳ ವ್ಯವಸ್ಥೆ ಕೂಡ ಮಾಡಲಾಗಿದೆ. ಇದರ ಸದುಪಯೋಗ ಪಡೆದು ನಾಡಿನ ಜನತೆ ಸುರಕ್ಷಿತವಾಗಿ ಪ್ರಯಾಣಿಸಬೇಕು ಎಂದರು.

ಒಟ್ಟು 52 ಸೀಟ್‌ಗಳುಳ್ಳ ಈ ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಕೂಡ ಮಾಡಲಾಗಿದೆ. ಹೀಗಾಗಿ ಯಾವುದೇ ಗೊಂದಲಕ್ಕೂ ಒಳಗಾಗದೆ ಪ್ರತಿಯೊಬ್ಬರು ತಮ್ಮ ತಮ್ಮ ಸುರಕ್ಷತೆಯೊಂದಿಗೆ ಪ್ರಯಾಣಿಸಲು ಅವಕಾಶವಿದೆ ಎಂದು ಹೇಳಿದರು.

KSRTC ಕಳೆದ ಡಿಸೆಂಬರ್ ಅಂತ್ಯದವರೆಗೆ 180 ಬಸ್‌ಗಳನ್ನು (153 ಡೀಸೆಲ್ ಮತ್ತು 27 ಎಲೆಕ್ಟ್ರಿಕ್) ಹೊಸದಾಗಿ ಪರಿಚಯಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 948 ಹೊಸ ಡೀಸೆಲ್ ಮತ್ತು 300 ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲು ಯೋಜಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Leave a Reply

error: Content is protected !!
LATEST
KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್‌ಡಿಕೆಗೆ ಜೆಡಿಎಸ್ ನಾಯಕರಿಂದ ಅದ್ದೂರಿ ಸ್ವಾಗತ ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ - ಜೂ.17ರಿಂದ ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ KSRTC: ಬಾನಂದೂರು - ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಸಂಬಂಧ ಕರೆದಿದ್ದ ಎಂಡಿಗಳ ಸಭೆ ಮುಂದೂಡಿಕೆ KSRTC- 3ನಿಗಮಗಳ 15 ಡಿಸಿಗಳ ವರ್ಗಾವಣೆ ಮಾಡಿ ಆದೇಶ: ಸಿಪಿಎಂ KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ KSRTC: ನಾಳೆಯಿಂದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜನ್ಮಸ್ಥಳ ಬಾನಂದೂರು- ಆದಿ ಚುಂಚನಗಿರಿಗೆ ನೇರ ಬಸ್ ಸೌಕರ್ಯ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಸಂಬಂಧ ಸಚಿವರ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ