ಜನರ ನಿರೀಕ್ಷೆ ಈಡೇರಿಸುವಲ್ಲಿ ಸಿಎಂ ವಿಫಲ: ಎಎಪಿ ರಾಜ್ಯಾಧ್ಯಕ್ಷ ಮು.ಚಂದ್ರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ ರಾಜ್ಯದ ಜನ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಸಿಎಂ ತಮ್ಮ ಬಜೆಟ್‌ನಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನೀಗಿಸಲು ಮೇಕೆದಾಟು ಯೋಜನೆ ಪ್ರಾರಂಭಿಸುವುದಾಗಿ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈ ಬಗ್ಗೆ ಬಜೆಟ್‌ನಲ್ಲಿ ಏನೂ ಮಾತನಾಡಿಲ್ಲ. ಅಧಿಕಾರಕ್ಕೆ ಬರುವ ಮುನ್ನ ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಈಗ ಸುಮ್ಮನಿರುವುದು ಏಕೆ ಎಂದು ಪ್ರಶ್ನೆ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕನ್ನಡಪರ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಕನ್ನಡದ ಬಗ್ಗೆ ಬಜೆಟ್‌ನಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ, ಕೇಂದ್ರ ಸರ್ಕಾರ ಬರಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸುತ್ತಾ ಕಾಲ ಕಳೆಯುತ್ತಿರುವ ರಾಜ್ಯ ಸರ್ಕಾರ, ಬಜೆಟ್‌ನಲ್ಲಿ ಬರ ಪರಿಹಾರ ಮೊತ್ತವನ್ನು ಏಕೆ ಹೆಚ್ಚಿಸಲ್ಲ. ₹2000 ನೀಡಿದರೆ ರೈತರಿಗೆ ಏನು ಪ್ರಯೋಜನ ಎಂದರು.
147 ಕಿಮೀ ವೈಟ್ ಟಾಪಿಂಗ್ ಯೋಜನೆಗೆ ₹1700 ಕೋಟಿ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಚಂದ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೈಟ್ ಟಾಪಿಂಗ್ ಹೆಸರಿನಲ್ಲಿ ಈಗಾಗಲೇ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಈಗ ಹಣ ಹೊಡೆಯುವ ಉದ್ದೇಶದಿಂದ ವೈಟ್ ಟಾಪಿಂಗ್‌ಗೆ ಅನುದಾನ ನೀಡಲಾಗಿದೆ ಎಂದರು.
ಸುರಂಗ ರಸ್ತೆ ನಿರ್ಮಾಣಕ್ಕೆ ಆಮ್ ಆದ್ಮಿ ಪಾರ್ಟಿ ಮೊದಲಿಂದ ವಿರೋಧ ವ್ಯಕ್ತಪಡಿಸಿದೆ. ಸುರಂಗ ಮಾರ್ಗ ಅವೈಜ್ಞಾನಿಕ ಎಂದು ಹೇಳಿದ್ದರೂ, ಲಜ್ಜೆಗೆಟ್ಟ ಸರ್ಕಾರ ಭ್ರಷ್ಟಾಚಾರ ಮಾಡಲು, ವಿರೋಧವನ್ನು ಲೆಕ್ಕಿಸದೇ ಸುರಂಗ ಮಾರ್ಗ ಯೋಜನೆ ಕೈಗೆತ್ತಿಕೊಂಡಿದೆ ಎಂದು ಅವರು ಟೀಕಿಸಿದರು.
ಕಳಸ ಬಂಡೂರಿ ಯೋಜನೆ ಹಾಗೂ ನವಲಿ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯ ರಾಜ್ಯದ ಪಾಲನ್ನು ಇನ್ನು ಘೋಷಿಸಿಲ್ಲ. ನೀರಾವರಿ ಯೋಜನೆಗಳ ಆರ್ಥಿಕ ಸಂಪನ್ಮೂಲಗಳ ವಿವರಗಳನ್ನು ನೀಡಿಲ್ಲ ಎಂದರು.
ಶಿಕ್ಷಣ, ಆರೋಗ್ಯ ಕ್ಷೇತ್ರದ ಕಡೆಗಣನೆ: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳಿಗೆ ನಮ್ಮ ವಿರೋಧವಿಲ್ಲ. ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕದ್ದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು, ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನು ಕಡೆಗಣಿಸಲಾಗಿದೆ ಎಂದರು.
ಈ ಬಾರಿ ₹27,353 ಕೋಟಿ ರಾಜಸ್ವ ಕೊರತೆ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಕೊಡಲು ಹಣ ಹೊಂದಿಸಲು ಆಗದ ಮೇಲೆ ಆಮ್ ಆದ್ಮಿ ಪಾರ್ಟಿಯ ಯೋಜನೆಗಳನ್ನು ಕಾಪಿ ಮಾಡಬಾರದಿತ್ತು ಎಂದರು. ದೆಹಲಿ ಸರ್ಕಾರ ಎಲ್ಲಾ ಉಚಿತಗಳನ್ನು ನೀಡಿದರೂ ಉಳಿತಾಯ ಬಜೆಟ್ ಮಂಡಿಸಿದೆ. ಭ್ರಷ್ಟಾಚಾರ ತೊಲಗಿಸಿದಿರೆ ರಾಜ್ಯದ ಜನರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಬಹುದು ಎಂದರು.
ಸಿಎಸ್ಆರ್ ಅನುದಾನ ನಂಬಿಕೊಂಡು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವುದಾಗಿ ಹೇಳಿರುವುದು ದುರಂತ. ಗುಣಮಟ್ಟ ಶಾಲಾ ಕೊಠಡಿ ನಿರ್ಮಾಣದ ಘೋಷಣೆ ಮಾಡಿಲ್ಲ. ಪ್ರೌಢಶಾಲೆಗಳ ಉನ್ನತಿಕರಣಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹಣವನ್ನು ಆಶ್ರಯಿಸುತ್ತಿದ್ದಾರೆ ಇದು ಸರಕಾರದ ಬಳಿ ಹಣವಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದರು.
ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಅನುದಾನ ನೀಡಲಾಗಿದೆ. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ ₹10 ಕೋಟಿ ನೀಡಿರುವುದು ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದೆ ಎಂದರು.
ಕೇವಲ 15 ಜಿಲ್ಲೆಗಳಿಗೆ ಮಾತ್ರ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ ಮಾಡುತ್ತಿದ್ದು ಉಳಿದ ಜಿಲ್ಲೆಗಳಿಗೆ ಅನ್ಯಾಯ ಮಾಡಲಾಗಿದೆ ಎಂದರು. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆಗಳ ಬಗ್ಗೆಯೂ ಘೋಷಣೆ ಮಾಡಿಲ್ಲ, ಇದು ಕಾಂಗ್ರೆಸ್ ಸರ್ಕಾರಕ್ಕೆ ಜನರ ಆರೋಗ್ಯದ ಬಗ್ಗೆ ಇರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದರು.
ಗ್ಯಾರಂಟಿಗಳಿಗೆ ಹಣ ಹೊಂದಿಸುವ ಸಲುವಾಗಿ ಮುದ್ರಾಂಕ ಶುಲ್ಕ ಹೆಚ್ಚಿಸಲಾಗಿದೆ. ಈಗ ಅಬಕಾರಿ ಮೇಲಿನ ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೆಚ್ಚಿಸಿದೆ ಎಂದರು.
Related
You Might Also Like
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಪತ್ನಿ ಹಾಗೂ ಪತ್ನಿ ತಂದೆಯ ಅಂದರೆ ಮಾನನ ಕಿರುಕುಳದಿಂದ ಮಾನಸಿಕವಾಗಿ ಭಾರಿ ನೋವು ಅನುಭವಿಸಿದ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದ...
9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ...
KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು...
KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಈಡೇರಿಕಗಾಗಿ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ. ಅದರ ಮುಂದುವರಿದ ಭಾಗವಾಗಿ...
ಸರ್ಕಾರದ ನಡೆಯೇ BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG
ಬೆಂಗಳೂರು: ರಾಜ್ಯ ಸರ್ಕಾರದ 5 ಮಹತ್ವದ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಕರ್ನಾಟಕದಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾದ ಯೋಜನೆ...
KSRTC ಕುಣಿಗಲ್: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರೊಬ್ಬರ ಮೇಲೆ ಲಾ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರೂ ಸಹ ಅವರನ್ನು ಬಂಧಿಸದಿರುವುದಕ್ಕೆ ಅಸಮಾಧಾನಗೊಂಡ ಹಲ್ಲೆಗೊಳಗಾದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ....
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ
ಸಾರಿಗೆ ನೌಕರರತ್ತ ಒಮ್ಮೆ ನೋಡಿ l ವೇತನ ಹೆಚ್ಚಳ ಸಮಸ್ಯೆಗೆ ಇತಿಶ್ರೀ ನಿಮ್ಮಿಂದ ಸಾಧ್ಯ ಬೆಂಗಳೂರು: ತಿಂಗಳು ಪೂರ್ತಿ ದುಡಿದರೂ ಸರಿಯಾದ ಸಮಯಕ್ಕೆ ವೇತನ ಸಿಗದೆ, ಸಿಕ್ಕ...
BMTC: ಆಧಾರ್ ಕಾರ್ಡ್ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್ ಕಾರ್ಡ್ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು...
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್
ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ...
KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್ ಬಂಧನ
ಮಡಿಕೇರಿ: ನಿತ್ಯ ತಾನು ಬಸ್ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ...
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು...
ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟರ್: ನಾಲೆಗೆ ಹಾರಿ ಆತ್ಮಹತ್ಯೆ
ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಅದನ್ನು ತೀರಿಸಲಾಗದೆ ಮನಸ್ಸಿನಲ್ಲಿ ಭಾರಿ ನೋವು ಅನುಭವಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ವಿಭಾಗದ ನಿರ್ವಾಹಕರೊಬ್ಬರು ನದಿಗೆ ಹಾರಿ...