NEWSನಮ್ಮಜಿಲ್ಲೆನಮ್ಮರಾಜ್ಯ

ಶಕ್ತಿ ಯೋಜನೆಗೆ ಚಾಲನೆ ನೀಡಿ, ವಂಚಿತ ಮಹಿಳೆಯರಿಗೆ ಬಲ ತುಂಬಲಿದೆ ಯೋಜನೆ ಎಂದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ದಲಿತರು ಹಾಗೂ ಮಹಿಳೆಯರು ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಂಥವರಿಗೆ ನಮ್ಮ ಈ ಯೋಜನೆ ಬಲ ತುಂಬಲಿದೆ ಎಂದು ಹೇಳಿದರು.

ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ. ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದರು.

10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ ಎಂದರು.

ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಟೀಕೆ ಮಾಡಿದರು. ಆದರೆ ನಾವು ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ, ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ ಎಂದು ಹೇಳಿದರು.

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದರು.

ಅನೇಕ ಮುಂದುವರಿದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕದಲ್ಲಿ ಶೇ. 53% ರಷ್ಟು, ಚೈನಾ ದಲ್ಲಿ ಶೇ. 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ. 57, ಇಂಡೋನೇಶಿಯಾದಲ್ಲಿ ಶೇ. 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ. 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಆದರೆ ಭಾರತದಲ್ಲಿ ಕೇವಲ ಶೇ.24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014ರ ನಂತರ ಶೇ.30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೋ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು