Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

KSDLನಿಂದ ಇದೇ ಮೊದಲ ಬಾರಿಗೆ 21 ಉತ್ಪನ್ನಗಳ ಬಿಡುಗಡೆ- ₹3 ಸಾವಿರ ಕೋಟಿ ಗುರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ 21 ನೂತನ ವೈವಿದ್ಯಮಯ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಲೋಕಾರ್ಪಣೆಗೊಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ವೇವ್ಸ್ ಶ್ರೇಣಿಯ 10 ಬಗೆಯ ಪ್ರೀಮಿಯಂ ಮೈಸೂರು ಸ್ಯಾಂಡಲ್ ಸಾಬೂನುಗಳು, 3 ಬಗೆಯ ಶವರ್ ಜೆಲ್, 6 ತರಹದ ಸೋಪ್ ಕಿಟ್, ಹ್ಯಾಂಡ್ ವಾಶ್ ಮತ್ತು ಕುಡಿಯುವ ನೀರು ಸಹ ಸೇರಿವೆ.

ಲೋಕಾರ್ಪಣೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 107 ವರ್ಷಗಳ ಇತಿಹಾಸ ಹೊಂದಿರುವ KSDL ಒಂದೇ ಬಾರಿಗೆ 21 ಉತ್ಪನ್ನಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲ ಬಾರಿಯಾಗಿದೆ. ಸಂಸ್ಥೆಯು ಈಗಿನ ತಲೆಮಾರಿನ ಯುವಜನರ ನಿರೀಕ್ಷೆಗೆ ತಕ್ಕಂತೆ ಶವರ್ ಜೆಲ್ ಸೇರಿದಂತೆ ಬಗೆಬಗೆಯ ಉತ್ಪನ್ನಗಳನ್ನು ಉತ್ಪಾದಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿಯಾಗಿದೆ. ಇದರ ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ಮುಂದುವರಿಯಬೇಕು ಎಂದರು.

ಹಿಂದಿನ ಸಾಲಿನಲ್ಲಿ ಸಂಸ್ಥೆಯು 132 ಕೋಟಿ ರೂ. ಲಾಭ ಮಾಡಿತ್ತು. ಎಂಬಿ ಪಾಟೀಲರು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮೇಲೆ, ಕಳೆದ ಎಂಟು ತಿಂಗಳಲ್ಲಿ ಲಾಭವು 182 ಕೋಟಿ ರೂ.ಗಳಿಗೇರಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲು ಅವರು ಹಲವು ಮಹತ್ವಾಕಾಂಕ್ಷಿ ಉಪಕ್ರಮಗಳನ್ನು ಕೈಗೊಂಡಿರುವುದು ಸ್ತುತ್ಯರ್ಹ ಸಂಗತಿಯಾಗಿದೆ ಎಂದು ಅವರು ಸಚಿವರ ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿ, ಇಬ್ಬರನ್ನು ಬಂಧಿಸಿ, ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾಗಿರುವ ಕೆಎಸ್ಡಿಎಲ್ ಉತ್ಪನ್ನಗಳು ನಕಲಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವ ಸಚಿವರನ್ನು ಮುಖ್ಯಮಂತ್ರಿ ಶ್ಲಾಘಿಸಿದರು.

ಸಂಸ್ಥೆಯ ವಹಿವಾಟು 3,000 ಕೋಟಿ ಗುರಿ: KSDL ಅಧ್ಯಕ್ಷರೂ ಆಗಿರುವ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಸಂಸ್ಥೆಯ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಚೀಚೆ ಇದೆ. ಇದನ್ನು ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳಾಗುವಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉತ್ಪಾದನೆಯ ಪ್ರಮಾಣವು ಇತ್ತೀಚೆಗೆ ಶೇ.25ರಷ್ಟು ಹೆಚ್ಚಾಗಿದೆ ಎಂದರು.

ಕಳೆದ ಎಂಟು ತಿಂಗಳಲ್ಲಿ ಸಂಶೋಧನೆ ನಡೆಸಿ, ದಾಖಲೆಯ ಕ್ಷಿಪ್ರ ಅವಧಿಯಲ್ಲಿ ಹೊಸ ಉತ್ಪನ್ನಗಳನ್ನು ಹೊರತರಲಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ತಾಂತ್ರಿಕ ಸಮಾಲೋಚಕ ರಜನೀಕಾಂತ್ ಅವರ ನೆರವು ನಿರ್ಣಾಯಕವಾಗಿದೆ. ಜೊತೆಗೆ, ಪಾರದರ್ಶಕ ಸಾಬೂನುಗಳು ಮತ್ತು ಸುಗಂಧಭರಿತ ಉತ್ಪನ್ನಗಳ ತಯಾರಿಕೆ ಕೂಡ ಸದ್ಯದಲ್ಲೇ ಆರಂಭವಾಗಲಿದೆ ಎಂದರು.

ಸಂಸ್ಥೆಯ ಉತ್ಪನ್ನಗಳ ನಕಲನ್ನು ತಡೆಯಲು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಅಮೆರಿಕ, ಯೂರೋಪು ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಕೆಎಸ್ಡಿಎಲ್ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಅಂತಾರಾಷ್ಟ್ರೀಯ ವಹಿವಾಟನ್ನು ಸದ್ಯದ 19 ಕೋಟಿ ರೂ.ಗಳಿಂದ 25 ಕೋಟಿ ರೂ.ಗಳಿಗೆ ಈ ವರ್ಷವೇ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ. ಜತೆಗೆ ಇಡೀ ಭಾರತದಲ್ಲಿ ಸಂಸ್ಥೆಯ ಮಾರುಕಟ್ಟೆ ಜಾಲವನ್ನು ಬೆಳೆಸಲಾಗುವುದು ಎಂದು ವಿವರಿಸಿದರು.

KSDL ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, KSDL consultant ರಜನೀಕಾಂತ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...