NEWSಆರೋಗ್ಯನಮ್ಮರಾಜ್ಯ

ಸಾವಿರ ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ- ಮಾನವ ಬಹು ಅಂಗಾಗ ಕಸಿ ಆಸ್ಪತ್ರೆ ನಿರ್ಮಾಣ: ಒಡಂಬಡಿಕೆಗೆ ಸಹಿ ಹಾಕಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟೇಬಲ್‌ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು 5 ವರ್ಷಗಳಲ್ಲಿ ₹4,000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಸಾವಿರ ಹಾಸಿಗೆಗಳ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ ಜಿ ಫೌಂಡೇಶನ್‌ ನಡುವಿನ ಒಡಂಬಡಿಕೆಗೆ ಸಹಿ ಹಾಕಿದ ಬಳಿಕ ಮಾತನಾಡಿದರು.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಹಾಸಿಗೆಗಳ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ. ಗಳ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ.

ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದು ತಿಳಿಸಿದರು.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ. ನೀಡುವ ಮೂಲಕ ಸರ್ಕಾರದೊಂದಿಗೆ ಕೈಜೋಡಿಸಿದ್ದಾರೆ.

ಇನ್ನು ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಿಎಂ ಅಭಿನಂದನೆ ಸಲ್ಲಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ