ಸಾರಿಗೆ ನೌಕರರ ಮುಷ್ಕರಕ್ಕೆ ಸಿಎಂ, ಸಾರಿಗೆ ಸಚಿವರು, ಎಂಡಿಗಳೇ ನೇರ ಕಾರಣ: ಲಿಖಿತ ಸಮಜಾಯಿಷಿ ಕೊಡುತ್ತಿರುವ ನೌಕರರು

ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ಮಾಡಲು ಮೂಲ ಕಾರಣ ನಾಲ್ಕೂ ಸಂಸ್ಥೆಯ ಆಡಳಿತ ವರ್ಗದ ಮುಖ್ಯಸ್ಥರೇ ಎಂದು ಆಪಾದನಾ ಪತ್ರ ನೀಡಿರುವ ಶಿಸ್ತುಪಾಲನಾಧಿಕಾರಿಯೂ ಆಗಿರುವ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನೌಕರರು ಲಿಖಿತ ಸಮಜಾಯಿಷಿ ಕೊಡುತ್ತಿದ್ದಾರೆ.
ತಾವು ಜಾರಿ ಮಾಡಿರುವ ಆಪಾದನಾ ಪತ್ರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರೆಸಿದ್ದೀರಿ. ಈ ಎಲ್ಲ ಆರೋಪಗಳನ್ನು ಈ ಕೆಳಕಂಡ ಕಾರಣಗಳಿಂದ ನಾನು ನಿರಾಕರಿಸುತ್ತೇನೆ ಎಂದು ಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸಮಜಾಯಿಷಿ ಪತ್ರದಲ್ಲಿ ಉತ್ತರಕೊಡುತ್ತಿದ್ದಾರೆ.
1) ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ಮಾಡಲು ಮೂಲ ಕಾರಣ ನಾಲ್ಕೂ ಸಂಸ್ಥೆಯ ಆಡಳಿತ ವರ್ಗದ ಮುಖ್ಯಸ್ಥರು. ಇವರು ಸಂಸ್ಥೆಯ ನೌಕರರಿಗೆ ಕಾಲಕಾಲಕ್ಕೆ ವೇತನ ಪರಿಷ್ಕರಣೆ ಮಾಡಿ ಆ ಪರಿಷ್ಕರಣೆಯ ಬಾಕಿಗಳನ್ನು ನೀಡಿದ್ದರೆ ಈ ಮುಷ್ಕರ ನಡೆಯುತ್ತಿರಲಿಲ್ಲ.
2) ಸಾರಿಗೆ ನೌಕರರ ಸಂಘಟನೆಗಳು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ನೀಡಿದ ಮನವಿಗಳಿಗೆ ಸರ್ಕಾರ ಸ್ಪಂದಿಸಿದ್ದರೆ ಈ ಮುಷ್ಕರ ನಡೆಯುತ್ತಿರಲಿಲ್ಲ. ಈ ಮುಷ್ಕರ ನಡೆಯಲು ರಾಜ್ಯದ ಮುಖ್ಯ ಮಂತ್ರಿ, ಸಾರಿಗೆ ಮಂತ್ರಿ, ಮುಖ್ಯ ಕಾರ್ಯದರ್ಶಿ, ಸಾರಿಗೆ ಕಾರ್ಯದರ್ಶಿ, ಆರ್ಥಿಕ ಇಲಾಖೆಯ ಕಾರ್ಯದರ್ಶಿ, ಎಲ್ಲ 4 ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಭದ್ರತಾ ಮತ್ತು ಜಾಗೃತ ನಿರ್ದೇಶಕರು, 4 ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿ (ಶಿಸ್ತು ಪಾಲನಾಧಿಕಾರಿ) ಅವರೇ ನೇರವಾಗಿ ಕಾರಣ ಎಂದು ತಿಳಿಸಿದ್ದಾರೆ.
3) ರಾಜ್ಯ ಸರ್ಕಾರದ ಎಲ್ಲ ನಿಗಮ ಮಂಡಳಿಗಳಿಗೆ ಕಾಲಕಾಲಕ್ಕೆ ವೇತನ ಪರಿಷ್ಕರಿಸುವ ಸರ್ಕಾರ ಸಾರಿಗೆ ನೌಕರರ ವಿಚಾರದಲ್ಲಿ ಮಾತ್ರ ಮಲತಾಯಿ ಧೋರಣೆ ನಡೆಸುತ್ತಿದೆ. ಆ ನಿಗಮ ಮಂಡಳಿಗಳ ಆಡಳಿತ ವರ್ಗ ಸರ್ಕಾರಕ್ಕೆ ಕಾಲ ಕಾಲಕ್ಕೆ ವೇತನ ಪರಿಷ್ಕರಣೆಯ ಸಂಬಂಧ ವ್ಯವಹರಿಸಿ ತನ್ನ ನೌಕರರಿಗೆ ವಿಳಂಬಕ್ಕೆ ಅವಕಾಶ ಮಾಡದೆ ವೇತನ ಪರಿಷ್ಕರಣೆಯನ್ನು ಮಾಡುವುದಿಂದ ಸರ್ಕಾರದ ಬೇರೆ ಎಲ್ಲ ನಿಗಮ ಮಂಡಳಿಗಳ ನೌಕರರು ಮುಷ್ಕರಕ್ಕೆ ಹೋಗುವುದಿಲ್ಲ.
ಇನ್ನು ಈ ಬಗ್ಗೆ ಸಮಗ್ರ ವಿಚಾರಣೆ ನಡೆಯಬೇಕಾಗಿದ್ದು ತಾವು ನನ್ನ ವಿರುದ್ಧ ಆರೋಪಿಸುವ ಎಲ್ಲ ಆಪಾದನೆಗಳಿಗೆ ದಾಖಲೆಗಳ ಸಮೇತ ನಾನು ವಿಚಾರಣೆಲ್ಲಿ ಸಾಕ್ಷಿಗಳನ್ನು ಒದಗಿಸಲು ಸಿದ್ಧನಿದ್ದು, ತಾವು ಕೂಡಲೇ ದಕ್ಷ ವಿಚಾರಣಾಧಿಕಾರಿಗಳನ್ನು ನೇಮಿಸಿ ವಿಚಾರಣೆಗೆ ಆದೇಶಿಸಬೇಕೆಂದು ತಮ್ಮನ್ನು ಕೋರುತ್ತೇವೆ ಎಂದು ನೌಕರರು ಮನವಿ ಮಾಡಿದ್ದಾರೆ.
4) ವಿಭಾಗ ನಿಯಂತ್ರಣಾಧಿಕಾರಿ ಹಾಗೂ ಶಿಸ್ತು ಪಾಲನಾಧಿಕಾರಿಯೂ ಆದ ತಾವು ಸಹ ವೇತನ ಅಧಿಕಾರಿಯಾಗಿರುತ್ತೀರಿ. ಕಾಲಕಾಲಕ್ಕೆ ವೇತನ ಪರಿಷ್ಕರಣೆ ಮಾಡುವಂತೆ ತಾವು ಸಂಸ್ಥೆಯ ಮೇಲಧಿಕಾರಿಗಳಿಗೆ ಸರ್ಕಾರಕ್ಕೆ ಮನವಿ ಮಾಡಿದ್ದರೆ ಈ ಮುಷ್ಕರ ನಡೆಯುತ್ತಿರಲಿಲ್ಲ. ಸಾರಿಗೆ ನೌಕರರ ಮುಷ್ಕರ ನಡೆಯಲು ತಾವೂ ಸಹ ನೇರ ಹೊಣೆಗಾರರಾಗಿರಿ.
5) ಸಾರಿಗೆ ಸಂಸ್ಥೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಈ ಸಂಬಂಧ ನ್ಯಾಯಾಲಯ ತೀರ್ಪು ಇನ್ನೂ ನೀಡಿಲ್ಲ. ನ್ಯಾಯಾಲಯದ ತೀರ್ಪು ಬರುವವರೆಗೂ ತಾವು ಯಾವುದೇ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಆದುದರಿಂದ ತಾವು ಜಾರಿ ಮಾಡಿರುವ ಆಪಾದನಾ ಪತ್ರದ ಮೇಲೆ ವಿಚಾರಣೆ ನಡೆಯುವುದು ಸೂಕ್ತವಾಗಿದ್ದು, ವಿಳಂಬಕ್ಕೆ ಅವಕಾಶ ನೀಡದೆ ವಿಚಾರಣಾಧಿಕಾರಿಯನ್ನು ನೇಮಿಸಬೇಕೆಂದು ತಮ್ಮನ್ನು ಕೋರುತ್ತೇವೆ. ವಿಚಾರಣೆ ನಡೆಸದೆ ತಾವು ಯಾವುದೇ ಶಿಸ್ತು ಕ್ರಮ ಕೈಗೊಳ್ಳಬಾರದೆಂದೂ ತಮ್ಮನ್ನು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ.
ಜತೆಗೆ ಈ ಪ್ರತಿಗಳನ್ನು ಮುಖ್ಯ ಮಂತ್ರಿಗಳು, ಸಾರಿಗೆ ಸಚಿವರು, ಮುಖ್ಯ ನ್ಯಾಯಮೂರ್ತಿ, ಮುಖ್ಯ ಕಾರ್ಯದರ್ಶಿ, ಆರ್ಥಿಕ ಇಲಾಖೆ ಕಾರ್ಯದರ್ಶಿ, ಸಾರಿಗೆ ಇಲಾಖೆ ಕಾರ್ಯದರ್ಶಿ, ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ನಿಗಮಗಳ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಆರ್ಥಿಕ ಸಲಹೆಗಾರರು, ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮಾಹಿತಿಗಾಗಿ ರವಾನಿಸುತ್ತಿದ್ದಾರೆ.
Related

You Might Also Like
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...
ವಿಶ್ವವಿಖ್ಯಾತ ಮೈಸೂರು ದಸರಾ ನವ ತರುಣಿಯಂತೆ ಆಚರಣೆಯಲ್ಲಿರುವುದು ಕನ್ನಡಿಗರ-ಕರ್ನಾಟಕದ ಹೆಮ್ಮೆ!
ಮೈಸೂರು ಮಲ್ಲಿಗೆ, ಅರಮನೆಗಳ ನಗರಿ, ಪಾರಂಪರಿಕ ಕಟ್ಟಡಗಳುಳ್ಳ ಸಾಂಸ್ಕೃತಿಕ ನಗರಿ ಎಂಬಿತ್ಯಾದಿಯಾಗಿ ವರ್ಣನೆಗೆ ನಿಲುಕಿ ವಿಶ್ವದಲ್ಲೇ ಚಿರ ಪರಿಚಿತವಾಗಿರುವ ಮೈಸೂರು ಈಗ ಪ್ರವಾಸಿಗರ ಕೇಂದ್ರ ಬಿಂದು. ರಾಜರ...
ಮೈಸೂರು: ದಸರಾ ಆನೆಗಳಿಗೆ ನಿತ್ಯ ಅರಮನೆಯಿಂದ ಬನ್ನಿ ಮಂಟಪದವರೆಗೆ ಬೆಳಗ್ಗೆ-ಸಂಜೆ ದೈನಂದಿನ ನಡಿಗೆ ತಾಲೀಮು
ಮೈಸೂರು: ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ತಾಲೀಮನ್ನು ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಈಗಾಗಲೇ ಆರಂಭಿಸಿದ್ದು, ಈ ತಾಲೀಮಿನಲ್ಲಿ ಗಜಪಡೆಯ ಮೊದಲ ಹಂತದ 9 ಆನೆಗಳು...