ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ – ಜಿಲ್ಲಾ ಮಂತ್ರಿಗಳು, ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ತಾಕೀತು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ಇಂದು ಖಡಕ್ ಸೂಚನೆ ನೀಡಿದರು.
ಅಲ್ಲದೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು. ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು DC, CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ತಿಳಿಸಿದರು.
ಸದ್ಯ ತೆಗೆದುಕೊಂಡಿರುವ ಕ್ರಮಗಳು: ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.
ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ ಎಂದು ವಿವರಿಸಿದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....